Monday, December 23, 2024
Google search engine
Homeಕ್ರೈಂಪುಷ್ಪಾ ಸಿನಿಮಾ ಖ್ಯಾತ ನಟ ಅಲ್ಲು ಅರ್ಜುನ್ ಅರೆಸ್ಟ್!.

ಪುಷ್ಪಾ ಸಿನಿಮಾ ಖ್ಯಾತ ನಟ ಅಲ್ಲು ಅರ್ಜುನ್ ಅರೆಸ್ಟ್!.

ಹೈದರಬಾದ್ : ಖ್ಯಾತ ತೆಲಗು ನಟ ಅಲ್ಲು ಅರ್ಜುನ್ ಅರೆಸ್ಟ್ ಆಗಿದ್ದಾರೆ ಎಂದು ಮಾಹಿತಿ ದೊರೆತಿದ್ದು. ಆಂದ್ರಪ್ರದೇಶದ ಚಿಕ್ಕಡಪಲ್ಲಿ ಪೋಲಿಸರು ಅಲ್ಲು ಅರ್ಜುನರನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಪುಷ್ಪ 2 ಸಿನಿಮಾದ ಪ್ರೀಮಿಯರ್ ಶೋವನ್ನು ಹೈದರಾಬಾದ್ನ ಸಂಧ್ಯಾ ಟಾಕೀಸ್ನಲ್ಲಿ ಏರ್ಪಡಿಸಲಾಗಿತ್ತು. ಈ ವೇಳೆ ಅಲ್ಲು ಅರ್ಜುನ್ ಈ ಟಾಕೀಸಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅಲ್ಲು ಅರ್ಜುನ್ರನ್ನು ನೋಡಲು ಜನಸಾಗರವೇ ಹರಿದು ಬಂದಿತ್ತು. ಈ ವೇಳೆ ನೂಕು ನುಗ್ಗಲು ಉಂಟಾಗಿ ರೇವತಿ ಎಂಬ ಮಹಿಳೆಯೊಬ್ಬರು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದರು ಮತ್ತು ಇವರ 7 ವರ್ಷದ ಮಗ ಗಂಭೀರವಾಗಿ ಗಾಯಗೊಂಡಿದ್ದರು. ಇದಕ್ಕೆ ಸಂತಾಪ ವ್ಯಕ್ತಪಡಿಸಿದ್ದ ಅಲ್ಲು ಅರ್ಜುನ್ ಮಹಿಳೆಯ ಕುಟುಂಬಕ್ಕೆ 25 ಲಕ್ಷ ಪರಿಹಾರವನ್ನು ಘೋಷಿಸಿದ್ದರು.

ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದ ಚಿಕ್ಕಡಪಲ್ಲಿ ಪೋಲಿಸರು ಟಾಕೀಸಿನ ಮಾಲೀಕ ಮತ್ತು ಮ್ಯಾನೇಜರ್ರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು. ಆದರೆ ಇಂದು ಪೋಲಿಸರು ನಟನನ್ನೆ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದ್ದು. ಹೆಚ್ಚಿನ ವಿಚಾರಣೆಗಾಗಿ ಪೋಲಿಸ್ ಠಾಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES
- Advertisment -spot_img

Most Popular

error: Content is protected !!