ಚಾಮರಾಜನಗರ: ಇತ್ತೀಚೆಗೆ ಹೃದಯಾಘಾತ (Heart Attack) ಹೆಚ್ಚಾಗಿ ಸಂಭವಿಸುತ್ತಿದೆ. ಹಿಂದೆಲ್ಲ ತೂಕ ಹೆಚ್ಚಳದಿಂದ, ರಕ್ತದೊತ್ತಡದಿಂದ ಈ ಹೃದಯಾಘಾತ ಸಂಭವಿಸುತ್ತಿತ್ತು. ಆದರೆ ಇತ್ತೀಚೆಗೆ ಚಿಕ್ಕಮಕ್ಕಳಿಗೂ ಹಾರ್ಟ್ ಅಟ್ಯಾಕ್ ಆಗುತ್ತಿದೆ. ಇದೀಗ ಚಾಮರಾಜನಗರದಲ್ಲಿ 3ನೇ ತರಗತಿಯ ವಿದ್ಯಾರ್ಥಿನಿಗೆ ಹೃದಯಾಘಾತ (School Girl Heart Attack) ಸಂಭವಿಸಿದೆ.
ಮೂರನೇ ತರಗತಿ ವಿದ್ಯಾರ್ಥಿನಿಗೆ ಕಾರ್ಡಿಯಾಕ್ ಅರೆಸ್ಟ್
ಚಾಮರಾಜನಗರದ ಸೆಂಟ್ ಫ್ರಾನ್ಸಿಸ್ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ಶಿಕ್ಷಕರಿಗೆ ನೋಟ್ಸ್ ತೋರಿಸಲೆಂದು ತೆರಳುತ್ತಿದ್ದಳು. ಈ ವೇಳೆ ತೇಜಸ್ವಿನಿ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಇನ್ನು ಟೀಚರ್ ಕಣ್ಣೆದುರೇ ಬಾಲಕಿ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾಳೆ.