Thursday, June 19, 2025
Google search engine
Homeಜಿಲ್ಲಾಬೆಂಗಳೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವನ ಬಂಧನ
spot_img

ಬೆಂಗಳೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವನ ಬಂಧನ

ಚಾಮರಾಜಪೇಟೆಯ ವಿನಾಯಕನಗರದಲ್ಲಿ ಮೂರು ಹಸುಗಳ ಕೆಚ್ಚಲು ಕತ್ತರಿಸಿ ಕ್ರೌರ್ಯ ಮೆರೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಹಸುಗಳ ಮಾಲೀಕರಾದ ಕರ್ಣ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಹಸುಗಳಿಗೆ ಚಿಕಿತ್ಸೆ ನೀಡಲಾಗಿದೆ. ಈ ಘಟನೆಯನ್ನು ವಿವಿಧ ರಾಜಕೀಯ ನಾಯಕರು ಖಂಡಿಸಿದ್ದಾರೆ.

ಬೆಂಗಳೂರು, ಜನವರಿ 13: ಚಾಮರಾಜಪೇಟೆಯ ಓಲ್ಡ್​ ಪೆನ್ಷನ್​ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ (Cow) ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನನ್ನು ಕಾಟನ್ ​ಪೇಟೆ ಪೊಲೀಸರು ಬಂಧಿಸಿ, ಸ್ಥಳ ಮಹಜರು ನಡೆಸಿದ್ದಾರೆ.

 ಘಟನೆ ವಿವರ

ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಎಂಬುವರು ಕಳೆದ ಹಲವು ವರ್ಷಗಳಿಂದ ಇಲ್ಲಿ ಹಸು ಸಾಕುತ್ತಿದ್ದಾರೆ. ಶನಿವಾರ ತಡರಾತ್ರಿ ಯಾರೋ ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದರು.

ಹಸುಗಳ ಮಾಲೀಕ ಕರ್ಣ ಕಾಟನ್​ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ​ದೂರು ಆಧರಿಸಿ ಪ್ರರಕಣ ದಾಖಲಿಸಿಕೊಂಡ ಪೊಲೀಸರು ಭಾನುವಾರ ರಾತ್ರಿ ಓರ್ವ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ರಮೇಶ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪೊಲೀಸರು ತನಿಖೆ ನಡೆಸಿದ್ದಾರೆ.

ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹಸುಗಳು ಕ್ಷೇಮವಾಗಿವೆ. ಆದರೆ, ಇನ್ನೂ ಎರಡು ವಾರ ಗಾಯ ಮಾಸಲು ಸಮಯಬೇಕಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆ ಮುಖಂಡರು, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಪಿಸಿ ಮೋಹನ್, ಎಂಎಲ್​ಸಿ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಮಾಲೀಕ ಕರ್ಣನಿಗೆ ಸಾಂತ್ವನ ಹೇಳಿದ್ದರು.

ಘಟನೆಯನ್ನು ಖಂಡಿಸಿದ ನಾಯಕರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ವಿಪಕ್ಷ ನಾಯಕ‌ ಆರ್. ಅಶೋಕ್ ವೈಯುಕ್ತಿಕವಾಗಿ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದರು.

ಚಾಮರಾಜಪೇಟೆಯ ಪಶು ಆಸ್ಪತ್ರೆಯನ್ನು ಕಬ್ಜಾ ಮಾಡಲು ಮುಂದಾಗಿದ್ದರು. ಈ ವೇಳೆ ನಾನು ಮತ್ತು ಸುತ್ತಮುತ್ತಲಿನ ಹಸುಗಳ ಮಾಲೀಕರು ಹಸುಗಳೊಂದಿಗೆ ಆಸ್ಪತ್ರೆ ಮುಂದೆ ಪ್ರತಿಭಟನೆ ಮಾಡಿದ್ವಿ. ಹೀಗಾಗಿ ಯಾರೋ ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎಂದು ಹಸುಗಳ ಮಾಲೀಕ ಕರ್ಣ ಆರೋಪಿಸಿದ್ದಾರೆ.

RELATED ARTICLES
- Advertisment -spot_img

Most Popular

error: Content is protected !!