ಬೆಳಗಾವಿ : ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಹಾಗಾಗೀ ಕಾನೂನು ಬದ್ಧ ವಸೂಲಾತಿಗೆ ಫೈನಾನ್ಸ್ ಗಳು ಕ್ರಮ ವಹಿಸಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳಿಗೆ ಎಚ್ಚರಿಕೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಎಂ.ಎಫ್.ಐ ಹಾಗೂ ಅಧಿಕಾರಿಗಳ ಸಭಯಲ್ಲಿ ಅವರು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿರುವ ಮೈಕ್ರೋ ಫೈನಾನ್ಸ್ ಗಳಿಂದ ೪-೫ ಪ್ರಕರಣಗಳು ವಂಚನೆ ಪ್ರಕರಣಗಳು ದಾಖಲಾಗಿದೆ. ಮಾಳಮಾರುತಿ ಮತ್ತು ಕಾಕತಿ ಪೋಲಿಸ್ ಠಾಣೆಯಲ್ಲಿ ಪ್ರಕರಣಗಳು ಸಾಲ ಪಡೆದು ಹಣ ದುರ್ಬಳಕೆ ಮಾಡಿರುವ ಕುರಿತು ದಾಖಲಾಗಿವೆ.
ಇಂತಹ ಪ್ರಕರಣಗಳ ಕಡಿವಾಣಕ್ಕೆ ಈಗಾಗಲೇ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಅನಧಿಕೃತ ವ್ಯಕ್ತಿಗಳ ಮೂಲಕ ಸಾಲ ಪಡೆಯಬಾರದು. ಸರ್ಕಾರಿ ಮೂಲಕ ಸಬ್ಸಿಡಿ ಸಾಲ ನೀಡುವುದಾಗಿ ನಂಬಿಸಿ ವಂಚನೆ ಎಸಗಲಾಗುತ್ತಿದೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶ ನೀಡಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ಮಧ್ಯವರ್ತಿಗಳಿಂದ ಸಬ್ಸಿಡಿ ಸಾಲ ಪಡೆದಿರುವುದಾಗಿ ಮೋಸ ಹೋದವರಿಗೆ ಜಿಲ್ಲಾಡಳಿತ, ಸ್ಥಳೀಯ ತಹಶಿಲ್ದಾರ, ನಗರ ಪೊಲೀಸ್ ಆಯುಕ್ತರಿಗೆ ಜವಾಬ್ದಾರಿ ವಹಿಸಲಾಗಿದೆ ಅವರಿಂದ ಮಧ್ಯವರ್ತಿಗಳ ಮೇಲೆ ಕ್ರಮ ಜರುಗಿಸಿ, ಸಾಲ ಮರು ಪಾವತಿಸುವ ಕೆಲಸ ಮಾಡುತ್ತೇವೆ ಎಂದರು.
ಮೈಕ್ರೋ ಫೈನಾನ್ಸ್ ಅವರು ಯಾವುದೇ ರೀತಿಯಲ್ಲಿ ಕಿರುಕುಳ ನೀಡಿದರೆ ಅಂತ ಫೈನಾನ್ಸಗಳ ವಿರುದ್ಧವಾಗಿ ಕ್ರಮ ತೆಗೆದುಕೊಳ್ಳಲು ಪೋಲಿಸ್ ಇಲಾಖೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ಅಲ್ಲದೇ ಸಾಲ ವಸುಲಾತಿಗೆ ಹೋಗುವ ಮೈಕ್ರೋ ಪೈನಾನ್ಸ್ ಸಿಬ್ಬಂದಿಗಳಿಗೆ ತೊಂದರೆಯಾದರೆ ಅಂತವರ ಮಾಹಿತಿ ಮೂಲಕ ಸ್ಥಳೀಯ ಪೊಲೀಸ್ ಠಾಣೆಗೆ ದೂರು ದಾಖಲಿಸಬೇಕು ಎಂದು ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳಿಗೆ ಭದ್ರತೆ ಕುರಿತು ಭರವಸೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್ ಅವರು ಮಾತನಾಡಿ ಸ್ಥಳಗಳಿಗೆ ಹೋಗಿ ಕಿರುಕುಳ ನೀಡಬಾರದು. ಕಾನೂನು ಬದ್ಧವಾಗಿ ನೋಟಿಸ್ ಜಾರಿ ಮಾಡಿ ಮಾಡಬೇಕು.
ಸರ್ಕಾರದ ಫೈನಾನ್ಸ್ ಗಳಿಂದ ಪಡೆದ ಸಾಲ ಮನ್ನಾ ಆಗುತ್ತಿದೆ ಎಂದು ಸಾರ್ವಜನಿಕ ವಲಯಗಳಲ್ಲಿ ನಂಬಿಕೆಯಿದೆ.
ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂದು ಕಾರಣಕ್ಕೆ ಮಾತ್ರ ಸರ್ಕಾರ ಮದ್ಯ ಪ್ರವೇಶಿಸಿದೆ ಇದರಲ್ಲಿ ಸಾಲ ಮನ್ನಾ ಎಂಬ ಪ್ರಶ್ನೆಯೇ ಇಲ್ಲ. ನಿಯಮಾನುಸಾರ ಕಾಲಾವಕಾಶ ನೀಡಿ ಸಾಲ ಮರುಪಾವತಿ ಮಾಡಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಎಸ್ಪಿ ಅವರು ಮಾತನಾಡಿ ನೋಂದಣಿ ಇಲ್ಲದ ಸಹಕಾರ ಸಂಸ್ಥೆಗಳು ಸಾಲ ವಿತರಣೆ ಮಾಡಿ ಬಡ್ಡಿ ವಸೂಲಿ ಮಾಡಿದಲ್ಲಿ, ಸೆಕ್ಷನ್ ಅಡಿಯಲ್ಲಿ ಅಂತಹ ಸಂಸ್ಥೆಗಳ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಡಾ. ಭೀಮಾಶಂಕರ ಗುಳೇದ ಅವರು ತಿಳಿಸಿದರು.
ನೋಂದಣಿ ಇಲ್ಲದ ಸಹಕಾರ ಸಂಸ್ಥೆಗಳು ಕೇವಲ 14% ಶೇಕಡ ರಷ್ಟು ಮಾತ್ರ ಬಡ್ಡಿ ವಿಧಿಸಬಹುದಾಗಿದೆ. ಇಂತಹ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬಹುದು ಸಾರ್ವಜನಿಕರಿಗೆ ಸಂಸ್ಥೆಗಳಿಂದ ಕಿರುಕುಳ ಬಂದಲ್ಲಿ ಪೊಲೀಸ್ ಠಾಣೆಗೆ ದೂರು ದಾಖಲಿಸಬೇಕು ಅದರ ಬದಲಿಗೆ ಆತ್ಮಹತ್ಯ ಮಾಡಿಕೊಳ್ಳುವ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಡಾ. ಭೀಮಾಶಂಕರ ಅವರು ಹೇಳಿದರು.
ಸಾಲ ಮರು ಪಾವತಿಯ ಸಾಮರ್ಥ್ಯದ ಆಧಾರದಮೇಲೆ ಸಾಲಗಳನ್ನು ನೀಡಬೇಕು. ಸಾರ್ವಜನಿಕರು ಸಾಲ ಪಡೆಯಲು ಏಜೆಂಟಗಳ ಮೂಲಕ ಪಡೆಯಬಾರದು. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ವಸೂಲಿ ಸಂದರ್ಭದಲ್ಲಿ ಅವಾಚ್ಯ ಶಬ್ದಗಳ ಬಳಕೆ ಮಾಡುತ್ತಿರುವ ಘಟನೆಗಳು ಕಂಡು ಬರುತ್ತಿವೆ. ಸಾಲ ಮರು ಪಾವತಿಗೆ ಸೂಚನೆ ನೀಡಲು ಕೆಲವು ನಿಯಮಗಳು ಇವೆ. ಒಂದುವೇಳೆ ಅನುಚಿತವಾಗಿ ವರ್ತಿಸಿದಲ್ಲಿ ಅಂತಹ ಸಂಸ್ಥೆಗಳ ಮೇಲೆ ಮೊಕದ್ದಮೆ ದಾಖಲಿಸಬಹುದು.
ಮರು ಪಾವತಿಗೆ ಸಂಸ್ಥೆಗಳು ಕಾನೂನು ಮೂಲಕ ಮಾತ್ರ ವಸೂಲಿ ಮಾಡಬಹುದಾಗಿದೆ. ಸಾರ್ವಜನಿಕರಿಗೆ ತಿಳಿಹೇಳಿ ಅವರ ಸಾಮರ್ಥ್ಯಕ್ಕೆ ಅನುಗುಣವಾಗಿ ಸಾಲಗಳನ್ನು ನೀಡಬೇಕು ಎಂದು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರು ಹೇಳಿದರು.
ಫೈನಾನ್ಸ್ ಪ್ರತಿನಿಧಿಗಳು:
ಗ್ರಾಮೀಣ ಭಾಗದಲ್ಲಿ ಕಂತು ಸಂಗ್ರಹಣೆ ಮಾಡಲು ಫೈನಾನ್ಸ್ ಮನೆಗಳಿಗೆ ಹೋದಲ್ಲಿ, ಸಾಲ ಪಡೆದವರು ಫೈನಾನ್ಸ್ ಸಿಬ್ಬಂದಿಗಳಿಗೆ ಹಣ ಪಾವತಿಸಿದೇ ನಿರಾಕರಿಸಿ ವಾಪಸ್ ಕಳುಹಿಸುವ ವರ್ತನೆಗಳು ಕಂಡು ಬರುತ್ತಿವೆ. ಇದರಿಂದ ಫೈನಾನ್ಸ್ ಸಿಬ್ಬಂದಿಗಳು ಕಂತು ಪಡೆಯಲು ಮನೆಗಳಿಗೆ ಹೋಗಲು ಹೆದರುವ ವಾತಾವರಣ ನಿರ್ಮಾಣವಾಗಿದೆ ಎಂದು ಫೈನಾನ್ಸ್ ಪ್ರತಿನಿಧಿಯೊಬ್ಬರೂ ಹೇಳಿದರು.
ಇದಕ್ಕೆ ಉತ್ತರಿಸಿದ ನಗರ ಪೋಲಿಸ್ ಆಯುಕ್ತರು
ಜಿಲ್ಲೆಯಲ್ಲಿ ಕೆಲವು ಪ್ರಕರಣಗಳು ಮಾತ್ರ ಕಂಡು ಬಂದಿದ್ದು, ಉಳಿದ ಫೈನಾನ್ಸ್ ಗಳು ಯಥಾಸ್ಥಿತಿಕಾರ್ಯ ನಿರ್ವಹಿಸುತ್ತಿವೆ. ರಾಜ್ಯದಲ್ಲಿ ಮೈಕ್ರೋ ಫೈನಾಸ್ ಬಗ್ಗೆ ತಪ್ಪು ತಿಳುವಳಿಕೆ ಹೋಗಿದೆ ವಂಚನೆ ಪ್ರಕರಣಗಳನ್ನು ಹೊರತುಪಡಿಸಿ ಬೇರೆ ಯಾವುದೇ ಫೈನಾನ್ಸ್ ಗಳಿಂದ ತೊಂದರೆ ಆಗಿಲ್ಲ. ಹಾಗಾಗೀ ಫೈನಾನ್ಸ್ ಗಳು ಸಾಲ ಮರು ಪಾವತಿ ಪಡೆಯುವಲ್ಲಿ ಕಾನೂನು ಬದ್ಧ ವಸೂಲಾತಿಗೆ ಕ್ರಮ ವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಸಹಕಾರ ಸಂಘಗಳ ಜಂಟಿ ನಿಬಂಧಕರು, ಸಹಕಾರ ಸಂಘಗಳ ಉಪನಿಬಂಧಕರು, ಪ್ರೊಬೇಷನರಿ ಐಎಎಸ್ ಅಧಿಕಾರಿ ದಿನೇಶಕುಮಾರ ಮೀನಾ, ಜಿಲ್ಲೆಯ ಎಲ್ಲ ಉಪ ವಿಭಾಗಾಧಿಕಾರಿಗಳು, ಜಿಲ್ಲೆಯ ಎಲ್ಲಾ ತಹಶೀಲ್ದಾರರು, ಪೋಲಿಸ್ ಇಲಾಖೆ ಅಧಿಕಾರಿಗಳು, ಜಿಲ್ಲಾ ಅಗ್ರಣಿ ಬ್ಯಾಂಕ್ ವ್ಯವಸ್ಥಾಪಕರು ಉಪಸ್ಥಿತರಿದ್ದರು.