Tuesday, April 29, 2025
Google search engine
Homeಜಿಲ್ಲಾಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಆಯ್ಕೆ...!
spot_img

ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಆಯ್ಕೆ…!

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ 23ನೇ ಅವಧಿಗೆ ನಡೆದ ಚುನಾವಣೆಯಲ್ಲಿ ಮೇಯರ್ ಹಾಗೂ ಉಪಮೇಯರ್ 2 ಸ್ಥಾನಗಳು ಬಿಜೆಪಿ ಪಾಲಾಗಿದೆ. ಮೇಯರ್ ಆಗಿ ಮಂಗೇಶ ಪವಾರ ಹಾಗೂ‌ ಉಪಮೇಯರ್ ಆಗಿ ವಾಣಿ‌ ವಿಲಾಸ ಜೋಶಿ‌ ಅವರು ಬಹುಮತದಿಂದ ಆಯ್ಕೆಯಾಗಿದ್ದಾರೆ.

ಮೇಯರ್ ಸ್ಥಾನ ಸಾಮಾನ್ಯ ಹಾಗೂ ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. 40 ಸದಸ್ಯರನ್ನು ಹೊಂದಿರುವ ಬಿಜೆಪಿ ಮತ್ತೊಮ್ಮೆ ಪಾಲಿಕೆ‌ ಚುಕ್ಕಾಣಿ ‌ಹಿಡಿಯುವಲ್ಲಿ ಯಶಸ್ವಿಯಾಯಿತು.

ಮೇಯರ್ ಮಂಗೇಶ್ ಪವಾರ್ ಮತ್ತು  ಉಪ ಮೇಯರ ವಾಣಿ ವಿಲಾಸ ಜೋಶಿ ಫೋಟೊ 

ಮಾಧ್ಯಮಗಳ ಜೊತೆಗೆ ಮಾತನಾಡಿದ ನೂತನ ಮೇಯರ್ ಮಂಗೇಶ ಪವಾರ, ಶಾಸಕ ಅಭಯ್ ಪಾಟೀಲ, ಸಂಸದ ಜಗದೀಶ ಶೆಟ್ಟರ್, ಎಂ ಎಲ್ ಸಿ ಸಾಬಣ್ಣ ತಳವಾರ ಹಾಗೂ ಎಲ್ಲಾ ನಮ್ಮ‌ ಪಾಲಿಕೆ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಸರ್ವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಪಾಲಿಕೆ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.

ಸಂಸದ ಜಗದೀಶ ಶೆಟ್ಟರ್ ಮಾತನಾಡಿ, ಸರ್ವರು
ಪರಸ್ಪರ ಸಹಕಾರ ಕೊಟ್ಟು ಬೆಳಗಾವಿ ಅಭಿವೃದ್ಧಿಗೆ ಕೆಲಸ ಮಾಡಬೇಕು‌. ಅಭಿವೃದ್ಧಿ ಯೋಜನೆ ಅನುಷ್ಠಾನ ಗೊಳಿಸುವಲ್ಲಿ ಯಶಸ್ವಿಯಾಗಬೇಕು ಎಂದ ಅವರು, ನೂತನ ಮೇಯರ್,ಉಪಮೇಯರಿಗೆ ಶುಭಕೋರಿದರು.

RELATED ARTICLES
- Advertisment -spot_img

Most Popular

error: Content is protected !!