ಬೆಳಗಾವಿ : ನಗರದ ರಾಷ್ಟ್ರೀಯ ಹೆದ್ದಾರಿ ಬಳಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ಪೈಪ್ ಲೈನ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನಪ್ಪಿರುವ ಘಟನೆ ಬುಧವಾರ ನಡೆದಿದೆ.
ಇಬ್ಬರು ಕಾರ್ಮಿಕನನ್ನು ಮಣ್ಣಿನಿಂದ ಹೊರ ತೆಗೆಯಲಾಗಿದು,ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಪಟಗುಂಡಿ ಗ್ರಾಮದ ಕಾರ್ಮಿಕರು ಬಸವರಾಜ್ ಸರವಿ (38) ಶಿವಲಿಂಗ್ ಸರವಿ (20) ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಬಳಿಕ ಮೃತವಾಗಿ ಪತ್ತೆಯಾದ ಬಸವರಾಜ್ ಸರವಿ, ಶಿವಲಿಂಗ್ ಸರವಿ ಅವರನ್ನು ಮರಣೋತ್ತರ ಪರೀಕ್ಷೆಗೆಂದು ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ಇಬ್ಬರ ಮೃತದೇಹ ರವಾನೆ ಮಾಡಲಾಗಿದೆ. ಮಾಳಮಾರುತಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.