ಬೆಳಗಾವಿ : ಬೆಳಗಾವಿ ತಾಲೂಕಿನ ಖನಗಾವ ಗ್ರಾಮದ ಜಮೀನಿನಲ್ಲಿ ಕೆಲಸ ಮಾಡಿ ಮನೆಗೆ ಹೊರಟ್ಟಿದ್ದ ಬಾಲಕಿಗೆ ಸಿಡಿಲು ಬಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಅತ್ಸಾ ಜಮಾದಾರ (15) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ರಜೆ ಇರುವ ಕಾರಣ ತಾಯಿಯ ಜೋತೆ ಜಮೀನು ಕೆಲಸಕ್ಕೆ ತೆರಳಿದ್ದ ವೇಳೆ ಮಳೆ ಬರುತ್ತಿದ್ದಂತೆ ಜಮೀನಿನಿಂದ ಹೊರ ಬಂದು ಮರದ ಕೆಳಗಡೆ ನಿಂತಾಗ ಸಿಡಿಲು ಬಡೆದು ಮೃತಪಟ್ಟಿದ್ದಾಳೆ.
ಮೃತ ಬಾಲಕಿಯ ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.