Tuesday, April 29, 2025
Google search engine
Homeವೈರಲ ಸುದ್ದಿಸಿಎಂ ಭಾಷಣದ ವೇಳೆ ಕಪ್ಪುಬಟ್ಟೆ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು
spot_img

ಸಿಎಂ ಭಾಷಣದ ವೇಳೆ ಕಪ್ಪುಬಟ್ಟೆ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು

ಬೆಳಗಾವಿ: ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿರುವದನ್ನು ಖಂಡಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪ್ರತಿಭಟನಾ ಸಮಾವೇಶದಲ್ಲಿ ಹೈಡ್ರಾಮಾ ಸೃಷ್ಠಿಯಾಗಿದ್ದು, ಬಿಜೆಪಿ ಮಹಿಳಾ ಕಾರ್ಯಕರ್ತರು ಕಪ್ಪು ಬಟ್ಟೆ ಹಿಡಿದು ವೇದಿಕೆಯತ್ತ ನುಗ್ಗಲು ಯತ್ನಿಸಿದ್ದಾರೆ.

ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸಮಾವೇಶ ನಡೆಯುತ್ತಿದ್ದು, ಬಿಜೆಪಿ ಮಹಿಳೆ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣದ ವೇಳೆಯೇ ಕಪ್ಪು ಬಟ್ಟೆ ಪ್ರದರ್ಶನ ಮಾಡಿದ್ದಾರೆ.‌

ಕಪ್ಪು ಬಟ್ಟೆ ಹಿಡಿದು ವೇದಿಕೆಯತ್ತ ನುಗ್ಗಲು ಬಿಜೆಪಿ ಮಹಿಳಾ ಕಾರ್ಯಕರ್ತರ ಯತ್ನಸಿ, ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಹಾಕಿದ್ದಾರೆ. ಮಹಿಳಾ ಕಾರ್ಯಕರ್ತೆಯರು ಘೋಷಣೆ ಕೂಗ್ತಿದ್ದಂತೆ ಕಾರ್ಯಕ್ರಮದಲ್ಲಿ ಗೊಂದಲ ಸೃಷ್ಟಿಯಾಗಿತ್ತು.‌ ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಕೆಲಹೊತ್ತು ಭಾಷಣ ಸ್ಥಗಿತಗೊಳಿಸಿ ಪೊಲೀಸರನ್ನು ವೇದಿಕೆಗೆ ಕರೆಯಿಸಿ ಸಿಎಂ ಸಿದ್ದರಾಮಯ್ಯ ಕ್ಲಾಸ್ ತೆಗೆದುಕೊಂಡರು.

ಯಾರು ರೀ ಬೆಳಗಾವಿ ಎಸ್ಪಿ ಎಂದು ಸಿಎಂ ಸಿದ್ದರಾಮಯ್ಯ ಅವರು ಏರು ಧ್ವನಿಯಲ್ಲಿ ಅವಾಜ್ ಹಾಕಿದರು.‌ ಆಗ ವೇದಿಕೆ ಮೇಲಿದ್ದ ಆಯೋಜಕರು ಬಿಜೆಪಿ ವಿರುದ್ಧ ಘೋಷಣೆ ಹಾಕಿದರು.‌ ಅಷ್ಟರಲ್ಲಿ ಕಪ್ಪು ಪಟ್ಟಿ ಪ್ರದರ್ಶನ ಮಾಡಿದ ಬಿಜೆಪಿ ಮಹಿಳಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಬಳಿಕ ವೇದಿಕೆಯಿಂದ ಇಳಿದು ಪರಿಸ್ಥಿತಿ ನೋಡಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತೆರಳಿದರು. ಈ ವೇಳೆ  ಡಿಸಿಪಿ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳನ್ನು ನಮ್ಮ ಸಮಾವೇಶದ ಸ್ಥಳಕ್ಕೆ ಬಿಜೆಪಿ ಕಾರ್ಯಕರ್ತರನ್ನು ಹೇಗೆ ಬಿಟ್ರಿ ಕೊಟ್ಟಿರಿ ಎಂದು ಕ್ಲಾಸ್ ತಗೆದುಕೊಂಡರು.

RELATED ARTICLES
- Advertisment -spot_img

Most Popular

error: Content is protected !!