ಗದಗ (ಕರ್ನಾಟಕ ವಾರ್ತೆ) ಫೆಬ್ರುವರಿ 13: ಸೋಮವಾರದಂದು ಸೊರಟೂರ ಗ್ರಾಮದಲ್ಲಿ ಆನೆ ಅಂಬಾರಿಯೊಂದಿಗೆ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ವೈಶಾಲಿ ಎಮ್. ಎಲ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಪ್ರಶಾಂತ ವರಗಪ್ಪನವರ, ಸಹಾಯಕ ನಿರ್ದೇಶಕರಾದ ಶ್ರೀಮತಿ ವಿಜಯಲಕ್ಷ್ಮೀ ಇಂಗಳಳ್ಳಿ , ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ದಲಿತ ಮುಖಂಡರು ಮತ್ತು ಸಾರ್ವಜನಿಕರು ಸ್ವಾಗತಿಸಿದರು. ಗ್ರಾಮದ ವಿವಿಧ ಕಲಾ ತಂಡಗಳು, ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಸಂವಿಧಾನ ಪೀಠಿಕೆಯನ್ನು ಜನಸಾಮಾನ್ಯರಿಗೆ ಅರ್ಥೈಸಬೇಕು. ಈ ಮೂಲಕ ಜನಸಾಮಾನ್ಯರು ಸಹ ಸಂವಿಧಾನವನ್ನು ಅರಿತು ತಮ್ಮ ಹಕ್ಕು ಕರ್ತವ್ಯಗಳನ್ನು ಪಾಲಿಸಬೇಕು. ಸಂವಿಧಾನ ದತ್ತವಾಗಿ ಇರುವ ಹಕ್ಕುಗಳ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಜನ ಸಾಮಾನ್ಯರೆಲ್ಲರೂ ಒಂದು ಎಂಬ ಭ್ರಾತೃತ್ವ ಭಾವನೆ ಮೂಡಿಸುವ ಆಶಯವನ್ನು ಸಂವಿಧಾನ ಜಾಗೃತಿ ಕಾರ್ಯಕ್ರಮ ಒಳಗೊಂಡಿದೆ.