Wednesday, June 18, 2025
Google search engine
Homeಸುದ್ದಿಪ್ರಯಾಣಿಕರಿದ್ದ ಏರ್​ ಇಂಡಿಯಾ ಪತನ
spot_img

ಪ್ರಯಾಣಿಕರಿದ್ದ ಏರ್​ ಇಂಡಿಯಾ ಪತನ

ಅಹಮದಾಬಾದ್: 242 ಪ್ರಯಾಣಿಕರಿದ್ದ ವಿಮಾನವೊಂದು ಗುಜರಾತ್​ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೇಘನಿನಗರ ಪ್ರದೇಶದಲ್ಲಿ ಪತನವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾದ ವಿಮಾನವು ಏರ್​ ಇಂಡಿಯಾ ವಿಮಾನವಾಗಿದ್ದು, 242 ಪ್ರಯಾಣಿಕರನ್ನು ಹೊತ್ತು ಲಂಡನ್ ಕಡೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ​

ವಿಮಾನ ಪತನದ ನಂತರ ಭಾರೀ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿ ಜಯೇಶ್ ಖಾಡಿಯಾ ತಿಳಿಸಿದ್ದಾರೆ.

RELATED ARTICLES
- Advertisment -spot_img

Most Popular

error: Content is protected !!