ಬೆಳಗಾವಿ: ಒಳಮೀಸಲಾತಿ ಜಾರಿಗೆ ಮಾಡಬೇಕು ಸೇರಿದಂತೆ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಸಂಘಟನೆ ನೇತೃತ್ವದಲ್ಲಿ ಗುರುವಾರ ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟಿಸಿ ಜಿಲ್ಲಾ ಆಡಳಿತ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.
ನಗರದ ಚೆನ್ನಮ್ಮ ವೃತ್ತದಿಂದ ಸೇರಿದ ಪ್ರತಿಭಟನಾಕಾರರು ಜಿಲ್ಲಾ ಕಚೇರಿವರೆಗೆ ಪಾದಯಾತ್ರೆ ಮೂಲಕ ತೆರಳಿ ಕೊಡಿ ಕೊಡಿ ಕೊಡಿ ಉದ್ಯೋಗ ಕೊಡಿ ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಸರ್ಕಾರ ಯುವಕರಿಗೆ ಉದ್ಯೋಗ ನೀಡದೇ ವಂಚನೆ ಮಾಡುತ್ತಿದೆ. ಒಳಮೀಸಲಾತಿ ಜಾರಿಗೆ ಮಾಡಬೇಕು, ಖಾಲಿ ಇರೋ ಹುದ್ದೆಗೆ ಭರ್ತಿ ಮಾಡಬೇಕು ಸರ್ಕಾರ ಸಮುದಾಯಕ್ಕೆ ಮೋಸ ಮಾಡಿದೆ ಕಳೆದ ನಾಲ್ಕು ವರ್ಷಗಳಿಂದ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಕರೆದಿಲ್ಲ ಎಂದು ಆಕ್ರೋಶ ಹೊರಹಾಕಿದರು.