Thursday, October 16, 2025
Google search engine
Homeಸುದ್ದಿಸುರಿದ ಧಾರಾಕಾರ ಮಳೆಯಿಂದಾಗಿ ಸಂಚಾರ ಸ್ಥಗಿತ
spot_img

ಸುರಿದ ಧಾರಾಕಾರ ಮಳೆಯಿಂದಾಗಿ ಸಂಚಾರ ಸ್ಥಗಿತ

ಉಗರಗೋಳ: ಗ್ರಾಮದಲ್ಲಿ ಶುಕ್ರವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಉಗರಗೋಳ–ಯಲ್ಲಮ್ಮನಗುಡ್ಡ ಮಾರ್ಗದಲ್ಲಿನ ಹಳ್ಳ ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಸಂಚಾರ ಸ್ಥಗಿತಗೊಂಡಿದ್ದು, ಸಾವಿರಾರು ಭಕ್ತರು ಪರದಾಡಿದರು.

ಆಗಸ್ಟ್‌ 9ರಂದು ಯಲ್ಲಮ್ಮನಗುಡ್ಡದಲ್ಲಿ ನೂಲು ಹುಣ್ಣಿಮೆ ಅಂಗವಾಗಿ ಜಾತ್ರೆ ನೆರವೇರಲಿದೆ. ಇದಕ್ಕಾಗಿ ಶುಕ್ರವಾರ ಸಂಜೆಯಿಂದಲೇ ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಿಂದ ಉಗರಗೋಳ ಮಾರ್ಗವಾಗಿ ಗುಡ್ಡಕ್ಕೆ ಭಕ್ತರ ದಂಡು ಹರಿದುಬರುತ್ತಿದೆ.

ಆದರೆ, ಶುಕ್ರವಾರ ಮಧ್ಯಾಹ್ನ 3ರಿಂದ ಎರಡು ತಾಸಿಗೂ ಅಧಿಕ ಹೊತ್ತು ಧಾರಾಕಾರ ಮಳೆಯಾಗಿ ಸಂಪರ್ಕ ಕಡಿತಗೊಂಡಿದ್ದು, ಹಳ್ಳದ ಎರಡೂ ಬದಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ. ಕೆಲವು ಭಕ್ತರು ಸುತ್ತು ಬಳಸಿ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುತ್ತಿದ್ದಾರೆ.

RELATED ARTICLES
- Advertisment -spot_img

Most Popular

error: Content is protected !!