ಬೆಳಗಾವಿ: ಧರ್ಮಸ್ಥಳದ ವಿರುದ್ಧ ಸುಳ್ಳು ಆರೋಪ ಮಾಡಿ ಹಿಂದೂ ಧಾರ್ಮಿಕ ಕ್ಷೇತ್ರಕ್ಕೆ ಕಳಂಕ ತರುವ ಕೃತ್ಯ ಖಂಡಿಸಿ, ನಗರದಲ್ಲಿ ಮಂಗಳವಾರ ಬೃಹತ್ ಮೌನ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದರು.
ಇದಕ್ಕೂ ಮುಂಚಿತವಾಗಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಮಧ್ಯೆಯೇ ಇಲ್ಲಿನ ಧರ್ಮವೀರ ಸಂಭಾಜಿ ವೃತ್ತದಿಂದ ಆರಂಭಗೊಂಡು ಬೃಹತ್ ಮೆರವಣಿಗೆ ರ್ಯಾಲಿ ಕಿರ್ಲೋಸ್ಕರ ರಸ್ತೆ, ಮಾರುತಿ ಗಲ್ಲಿ, ಗಣಪತಿ ಗಲ್ಲಿ, ಕಾಕತಿವೇಸ್, ರಾಣಿ ಚನ್ನಮ್ಮ ವೃತ್ತದ ಮಾರ್ಗವಾಗಿ ಸಾಗಿ ಜಿಲ್ಲಾಧಿಕಾರಿ ಕಚೇರಿಗೆ ಆವರಣದ ಬಳಿ ಮುಕ್ತಾಯಗೊಂಡಿತು.
ಪ್ರತಿಭಟನೆಯಲ್ಲಿ ಪರಮಪೂಜ್ಯ ಶ್ರೀ ಜಗದ್ಗುರು ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳು, ಗುರುಶಾಂತೇಶ್ವರ ಹಿರೇಮಠ ಸ್ವಾಮೀಜಿಗಳು, ಶ್ರೀ ಸಂಪಾದನಾ ಮಹಾಸ್ವಾಮಿಗಳು, ಶ್ರೀ ನೀಲಕಂಠ ಮಹಾಸ್ವಾಮಿಗಳು, ಗಂಗಾಧರ ಮಹಾಸ್ವಾಮಿಗಳು ಹಾಗೂ ಶಾಸಕ ಅಭಯ ಪಾಟೀಲ, ಮಾಜಿ ಶಾಸಕರಾದ ಶಾಸಕ ಸಂಜಯ ಪಾಟೀಲ, ಡಾ. ವಿಶ್ವನಾಥ ಪಾಟೀಲ, ಮಹಾಂತೇಶ ದೊಡ್ಡಗೌಡರ ಅನಿಲ ಬೆನಕೆ ಸೇರಿದಂತೆ ಇತರರು ಪಾಲ್ಗೊಂಡಿದ್ದರು.