ಬೆಳಗಾವಿ: ತನ್ನ ವಿಭಿನ್ನ ರಿಯಾಲಿಟಿ ಶೋಗಳ ಮೂಲಕ ಕರುನಾಡನ್ನ ರಂಜಿಸುತ್ತ ಬಂದಿರುವ ಜೀ ಕನ್ನಡ ವಾಹಿನಿಯು, ಈಗ ತನ್ನ ಹಿಟ್ ರಿಯಾಲಿಟಿ ಶೋಗಳಾದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳನ್ನ ಮತ್ತೆ ತೆರೆಗೆ ತರಲು ತಯಾರಿ ನಡೆಸಿದೆ. 7 ಸೀಸನ್‌ಗಳನ್ನ ಯಶಸ್ವಿಯಾಗಿ ಪೂರೈಸಿರುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಈಗ ತನ್ನ 8 ನೇ ಆವೃತ್ತಿಯೊಂದಿಗೆ ಮತ್ತೆ ಕರುನಾಡನ್ನ ಕುಣಿಸಲು ತಯಾರಾಗಿದೆ.ಈಗಾಗಲೇ ಸಾಕಷ್ಟು ಯುವ ನೃತ್ಯ ನಿರ್ದೇಶಕರನ್ನ ಸ್ಯಾಂಡಲ್ ವುಡ್ಡಿಗೆ ನೀಡಿರುವ ಈ ರಿಯಾಲಿಟಿ ಶೋ ಮತ್ತಷ್ಟು ನೃತ್ಯ ನಿರ್ದೇಶಕರನ್ನ ಹುಟ್ಟು ಹಾಕುವ ಕೆಲಸವನ್ನ ಈ ಆವೃತ್ತಿಯಲ್ಲಿ ಮತ್ತೆ ಮಾಡಲಿದೆ.
ಇದರ ಜೊತೆಜೊತೆಗೆ ಸತತ 4 ಹಿಟ್ ಸೀಸನ್ನುಗಳನ್ನ ಕೊಟ್ಟಿರುವ ಕರುನಾಡಿನ ನೆಚ್ಚಿನ ರಿಯಾಲಿಟಿ ಶೋಗಳಲ್ಲಿ ಒಂದಾದ ಕಾಮಿಡಿ ಕಿಲಾಡಿಗಳು ಈಗಾಗಲೇ ಸಾಕಷ್ಟು ಕಾಮಿಡಿ ಕಲಾವಿದರನ್ನ ಕರುನಾಡಿಗೆ ನೀಡಿರುವುದು ಈಗ ಇತಿಹಾಸ.
ವೇದಿಕೆಗಾಗಿ ಕಾಯುತ್ತಿರುವ ಅದೆಷ್ಟೋ ಹಾಸ್ಯ ನಟನಟಿಯರ ಕನಸನ್ನ ನನಸು ಮಾಡುತ್ತಿರುವ ಈ ರಿಯಾಲಿಟಿ ಶೋ ಈ ಬಾರಿ ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ಎಂಬ ಹೊಸ ರೂಪದಲ್ಲಿ ಕರುನಾಡಿನ ಮುಂದೆ ಬರಲಿದೆ. ಈ ಹಂತದಲ್ಲಿ ಇದಕ್ಕೆ
ಪೂರ್ವಬಾವಿ ತಯಾರಿ ಎಂಬಂತೆ ಆಡಿಷನ್ ಪ್ರಕ್ರಿಯೇ ಕರುನಾಡಿನಾದ್ಯಂತ ಶುರುವಾಗಿದೆ.
ಇದೇ ಮಾರ್ಚ್ 9 ರಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ಸಂಗಮೇಶ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್, ಆಟೋನಗರ ಬೆಳಗಾವಿ.ಇಲ್ಲಿ ಆಡಿಷನ್ ನಡೆಯಲಿದೆ. ಆಡಿಷನಲ್ಲಿ ಭಾಗವಹಿಸಲು ಇಚ್ಚಿಸುವವರು ಅಡ್ರಸ್ ಪ್ರೂಪ್ ಜೆರಾಕ್ಸ್ ಜೊತೆ ಎರಡು ಪಾಸ್ ಪೋರ್ಟ್ ಸೈಜ್ ಪೋಟೊದೊಂದಿಗೆ ಆಡಿಷನ್ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದ್ದು,ಜೀ ಕನ್ನಡ ವಾಹಿನಿಯು ಈ ಆಡಿಷನ್ಗೆ ಯಾವುದೇ ಶುಲ್ಕು ವಿಧಿಸಿರುವುದಿಲ್ಲವೆಂದು ಸ್ಪಷ್ಟ ಪಡಿಸಿದೆ ಹಾಗು ವಾಹಿನಿಯ ಹೆಸರಲ್ಲಿ ಹಣ ಕೇಳುವವರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ತಿಳಿಸಿದೆ.