ರಾಯಬಾಗ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಅಳಿಯನ ಮೇಲೆ ಮಾವನಿಂದ ಫೈರಿಂಗ್ ಮಾಡಿರುವಂತಹ ಘಟನೆ ತಾಲೂಕಿನ ಮೊರಬ ಗ್ರಾಮದ ಬಳಿ ಕೃತ್ಯ ನಡೆದಿದೆ.
30 ಗುಂಟೆ ಜಮೀನಿಗಾಗಿ ಶಾಂತಿನಾಥ ಆಲಗೂರು (32) ಮೇಲೆ ಮಾವ ಧನಪಾಲ್ ಆಸಂಗಿ (54) ಫೈರಿಂಗ್ ಮಾಡಿದ್ದಾರೆ. ಆತ್ಮರಕ್ಷಣೆಗಾಗಿ ಪಡೆದಿದ್ದ ರಿವಾಲ್ವರ್ ದಿಂದ ಒಂದು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ ಧನಪಾಲ್.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಆರೋಪಿ ಧನಪಾಲ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೊಟ್ಟೆ ಭಾಗಕ್ಕೆ ಗುಂಡು ತಾಗಿದ್ದು, ಶಾಂತಿನಾಥ್ ಸ್ಥಿತಿ ಗಂಭೀರವಾಗಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಗಂಭೀರ ಗಾಯವಾದ ಹಿನ್ನೆಲೆ ಬೆಳಗಾವಿ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.