ಕಾಗವಾಡ: ಲೋಕಸಭಾ ಚುನಾವಣೆಯಲ್ಲಿ ಯುವ ಜನತೆ ಕಡ್ಡಾಯವಾಗಿ ಮತದಾನ ಮಾಡುವಂತೆ ಕಾಗವಾಡ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ, ತಾಪಂ ಇಒ ಪ್ರವೀಣ ಪಾಟೀಲ್ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯತ ಕಚೇರಿ ಆವರಣದಲ್ಲಿ ಬುಧವಾರ ಸ್ವೀಪ್ ಚಟುವಟಿಕೆಯಡಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನ ಹಾಗೂ ಸೆಲ್ಪಿ ಬೂತ್ ಗೆ ಚಾಲನೆ ನೀಡಿ ಅವರು ಮಾತನಾಡಿದರು.
ಮಾರ್ಚ್ 25 ವರೆಗೂ 17 ವರ್ಷ ತುಂಬಿದವರು ಮತದಾನ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸಿಕೊಳ್ಳಲು ಅವಕಾಶವಿದ್ದು, ಯುವ ಜನತೆ ಇದರ ಸದುಪಯೋಗ ಪಡೆದು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ನರೇಗಾ ಎಡಿ ಗೋಪಾಲ ಮಾಳಿ, ಪಂಚಾಯತ್ ರಾಜ್ ಎಡಿ ಎ.ಡಿ. ಅನ್ಸಾರಿ, ಪ್ರದೀಪ ಆನಗೊಂಡ, ಸತೀಶ ಬೆಕ್ಕೇರಿ, ಆದಿನಾಥ ಮುಂತಾದವರು ಇದ್ದರು.