ಬೆಳಗಾವಿ ಜಿಲ್ಲಾಸ್ಪತ್ರೆಗೆ ಸಂಸದ ಜಗದೀಶ್ ಶೆಟ್ಟರ್ ಬೇಟಿ..
ಡೆಂಗ್ಯೂ ಹಾಗೂ ಸಾಂಕ್ರಾಮಿಕ ರೋಗಗಳ ಬಗ್ಗೆ ಮಾಹಿತಿ ಸಂಗ್ರಹ..
ಬೆಳಗಾವಿ: ಬುಧವಾರ ದಿನಾಂಕ 09/07/2024 ರಂದು ಬೆಳಗಾವಿಯ ಸಂಸದ ಜಗದೀಶ್ ಶೆಟ್ಟರ್ ಅವರು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಬೇಟಿ ನೀಡಿ, ಡೆಂಗ್ಯೂ ಪೀಡಿತ ರೋಗಿಗಳೊಂದಿಗೆ ಮಾತನಾಡಿ, ಜಿಲ್ಲಾಸ್ಪತ್ರೆಯ ಕಾರ್ಯಗಳನ್ನು ಪರಿಶೀಲನೆ ಮಾಡಿದ್ದಾರೆ..
ಜಿಲ್ಲೆಯಲ್ಲಿ ಡೆಂಗ್ಯೂ, ಚಿಕನ್ ಗೂನ್ಯಾ ಹಾಗೂ ಮಲೇರಿಯಾ ಸಾಂಕ್ರಾಮಿಕ ರೋಗ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲಾ ಆರೋಗ್ಯಾಧಿಕಾರಿ, ಬಿಮ್ಸ್ ನಿರ್ದೇಶಕರು, ವೈದ್ಯಕೀಯ ಅಧಿಕಾರಿಗಳು, ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ,ರೋಗ ನಿಯಂತ್ರಣ ಹಾಗೂ ನಿವಾರಣೆಗಳ ಬಗ್ಗೆ ಚರ್ಚಿಸಿದ್ದಾರೆ..
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್ ಅವರು ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಾಗಿವೆ, ಸರಕಾರ ಸೂಕ್ತ ಕ್ರಮಗಳನ್ನು ಹೆಚ್ಚಾಗಿ ಕೈಗೊಳ್ಳಬೇಕು, ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿತಗೊಂಡಿದೆ ಎಂದಿದ್ದಾರೆ.
ಮುಖ್ಯಮಂತ್ರಿಯವರು, ಸಚಿವ ಶಾಸಕರು, ಜಿಲ್ಲಾಧಿಕಾರಿಗಳು ಜನರ ಬಳಿಗೆ ಹೋಗಿ ಸಮಸ್ಯೆ ಆಲಿಸಬೇಕು ಎಂಬ ಸೂಚನೆ ನೀಡಿರುವುದು ಆಡಳಿತ ಸರಿಯಾಗಿ ನಡೆಯುತ್ತಿಲ್ಲ ಎಂಬ ಸಂಶಯಕ್ಕೆ ಕಾರಣವಾಗಿದೆ.
ಬೆಳಗಾವಿ ಜಿಲ್ಲಾಸ್ಪತ್ರೆಯು ಡೆಂಗ್ಯೂ ನಿಯಂತ್ರಣ ಹಾಗೂ ರೋಗಿಗಳ ಉಪಚಾರದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು, ಇನ್ನು ಪರಿಣಾಮಕಾರಿಯಾದ ಸೇವೆಯನ್ನು ಸಾರ್ವಜನಿಕರಿಗೆ ಒದಗಿಸುವಂತೆ ಆಸ್ಪತ್ರೆಯ ವೈದ್ಯರಿಗೆ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ..
ವರದಿ ಪ್ರಕಾಶ್ ಬಸಪ್ಪ ಕುರಗುಂದ..