Monday, December 23, 2024
Google search engine
Homeರಾಜಕೀಯಮಾಲಿನ್ಯದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ಸಾಕಷ್ಟು ಪಟಾಕಿ ಹೊಡೆಯಿರಿ : ಅಣ್ಣಾಮಲೈ

ಮಾಲಿನ್ಯದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ಸಾಕಷ್ಟು ಪಟಾಕಿ ಹೊಡೆಯಿರಿ : ಅಣ್ಣಾಮಲೈ

ಮಾಲಿನ್ಯದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ಸಾಕಷ್ಟು ಪಟಾಕಿ ಹೊಡೆಯಿರಿ ಎಂದು ತಮಿಳುನಾಡು ರಾಜ್ಯ ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಅಣ್ಣಾಮಲೈ ಜನರಿಗೆ ಕರೆ ನೀಡಿದ್ದು. ಪಟಾಕಿ ಉದ್ಯಮದಲ್ಲಿ ತೊಡಗಿರುವ ಕಾರ್ಮಿಕರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ದೀಪಾವಳಿಯಂದು ಸಾಕಷ್ಟು ಪ್ರಮಾಣದಲ್ಲಿ ಪಟಾಕಿಗಳನ್ನು ಖರೀದಿಸಿ, ಸಿಡಿಸುವಂತೆ ಬಿಜೆಪಿ ನಾಯಕ ಕೆ.ಅಣ್ಣಾಮಲೈ ಮನವಿ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ವಿಡಿಯೊವನ್ನು ಪೋಸ್ಟ್ ಮಾಡಿರುವ ಅವರು, ಪಟಾಕಿಗಳನ್ನು ಸಿಡಿಸುವ ಅಗತ್ಯವನ್ನು ವಿವರಿಸಿದ್ದಾರೆ. ‘ವಾತಾವರಣಕ್ಕೆ ಇಂಗಾಲ ಹೊರಸೂಸುವಿಕೆಯಲ್ಲಿ ಭಾರತ 125ನೇ ಸ್ಥಾನದಲ್ಲಿದೆ, ಯುಎಸ್ 16 ಮತ್ತು ಚೀನಾ 25ನೇ ಸ್ಥಾನದಲ್ಲಿವೆ. ಆದರೆ ನಾವು ಕೇವಲ ಒಂದು ದಿನ ಪಟಾಕಿ ಸಿಡಿಸುವುದನ್ನು ಪ್ರಮುಖ ವಿಷಯವಾಗಿ ಚರ್ಚಿಸುತ್ತಿದ್ದೇವೆ. ಸುಮಾರು 8 ಲಕ್ಷ ಜನ ನೇರವಾಗಿ ಮತ್ತು ಪರೋಕ್ಷವಾಗಿ ಪಟಾಕಿ ಉದ್ಯಮದೊಂದಿಗೆ ಸಂಪರ್ಕ ಹೊಂದಿದ್ದಾರೆ. ಅವರು ನಮ್ಮ ಸಂತೋಷಕ್ಕಾಗಿ ಸಾಕಷ್ಟು ಸವಾಲುಗಳ ನಡುವೆ ಪಟಾಕಿಗಳನ್ನು ತಯಾರಿಸುತ್ತಾರೆ. ನಾವು ಅವರ ಸಂತೋಷಕ್ಕಾಗಿ ಪಟಾಕಿಗಳನ್ನು ಖರೀದಿಸಿ ಏಕೆ ಸಿಡಿಸಬಾರದು’ ಎಂದು ಅವರು ಕೇಳಿದ್ದಾರೆ

RELATED ARTICLES
- Advertisment -spot_img

Most Popular

error: Content is protected !!