ಬೆಳಗಾವಿ : ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಎಸ್ ಡಿ ಎ ಆಗಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಹಶೀಲ್ದಾರ ಕಚೇರಿಯಲ್ಲಿ ಇಂದು ಮಂಗಳವಾರ ಬೆಳಗ್ಗೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು SDA ರುದ್ರೇಶ ಯಡವನ್ನವರ್ ಎಂದು ಗುರುತಿಸಲಾಗಿದೆ . ಬೆಳಗಾವಿ ರಿಸಲ್ದಾರ್ ಗಲ್ಲಿಯಲ್ಲಿರುವ ಮಹಾನಗರ ಪಾಲಿಕೆಯ ಹಳೆಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಹಶೀಲ್ದಾರ್ ಕಚೇರಿಯಲ್ಲಿ ರುದ್ರನ್ನಾ ಅವರು ತಮ್ಮ ಹಿರಿಯ ಅಧಿಕಾರಿಗಳ ಕಿರುಕುಳ ತಡೆಯಲಾರದೆ ಹಿರಿಯ ಅಧಿಕಾರಿಯ ಚಂಬರಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರುದ್ರಣ್ಣ ಅವರಿಗೆ ಬೆಳಗಾವಿ ತಹಶಿಲ್ದಾರರ ಕಚೇರಿಯಿಂದ ಸವದತ್ತಿ ಯಲ್ಲಮ್ಮನ ದೇವಸ್ಥಾನದ ಅಡಳಿತ ಮಂಡಳಿಗೆ ಜಿಲ್ಲಾಧಿಕಾರಿ ವರ್ಗಾವಣೆ ಮಾಡಿದ್ದರು. ತನ್ನ ವರ್ಗಾವಣೆ ರದ್ದುಗೊಳಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿ ಮಾಡಿಕೊಂಡಿದ್ದ ಎನ್ನಲಾಗಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿಯೂ ರುದ್ರಣ್ಣ ಬರೆದುಕೊಂಡು ತಹಶಿಲ್ದಾರರ ಕಚೇರಿಯ ವಾಟ್ಸಪ್ ಗ್ರೂಪ್ ನಲ್ಲಿಯೂ ಚರ್ಚೆ ನಡೆಸಿ ಬಳಿಕ ಅದನ್ನು ಡಿಲಿಟ್ ಮಾಡಿದ್ದ ಎನ್ನುವ ಮಾಹಿತಿ ಇದ್ದು ಸ್ಥಳಕ್ಕೆ ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಖಡೇ ಬಜಾರ್ ಪೊಲೀಸರು ಹಾಗೂ ಡಿಸಿಪಿ ಜಗದೀಶ್ ರೋಹನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.