ತಹಶೀಲ್ದಾರ್ ಕಚೇರಿ ಸಿಬ್ಬಂದಿ ರುದ್ರೇಶ ಯಡಣ್ಣವರ ಆತ್ಮಹತ್ಯೆ ವಿಚಾರವಾಗಿ ಮೃತ ವ್ಯಕ್ತಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಹೆಸರು ಎಲ್ಲಿಯೂ ಹೇಳಿಲ್ಲ. ಆದ್ದರಿಂದ ರಾಜೀನಾಮೆ ಪ್ರಶ್ನೆ ಉದ್ಭವಿಸುವುದಿಲ್ಲ. ಪ್ರಕರಣ ಸಂಪೂರ್ಣ ತನಿಖೆ ನಂತರ ಸತ್ಯಾಸತ್ಯತೆ ಹೊರಬರಲಿದೆ. ಪೊಲೀಸರು ಈಗಾಗಲೇ ತನಿಖೆ ಕೈಗೊಂಡಿದ್ದಾರೆ. ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.