Thursday, June 19, 2025
Google search engine
Homeಕ್ರೈಂಸುವರ್ಣ ಸೌಧದಲ್ಲೇ ಬಿಜೆಪಿ ಎಂಎಲ್ಸಿ ಸಿಟಿ ರವಿಯನ್ನು ಬಂಧಿಸಿದ ಪೊಲೀಸರು
spot_img

ಸುವರ್ಣ ಸೌಧದಲ್ಲೇ ಬಿಜೆಪಿ ಎಂಎಲ್ಸಿ ಸಿಟಿ ರವಿಯನ್ನು ಬಂಧಿಸಿದ ಪೊಲೀಸರು

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಬಂಧನವಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿರುವ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿದ್ದಾರೆ. ಬಲವಂತಾಗಿಯೇ ಪೊಲೀಸರು ಸುವರ್ಣಸೌಧದಿಂದ ಸಿಟಿ ರವಿ ಅವರನ್ನು ಎತ್ತಿಕೊಂಡು ಬಂದು ವಾಹನದಲ್ಲಿ ಕೂರಿಸಿಕೊಂಡು ಹೋಗಿದ್ದಾರೆ.

ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಕೇಸ್ ದಾಖಲಾಗಿದ್ದು. ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ. ಇನ್ನು ಸೆಕ್ಷನ್ 75-ಲೈಂಗಿಕ ಬಣ್ಣದ ಟೀಕೆಗೆ 1 ವರ್ಷದವರೆಗೆ ಸೆರೆವಾಸ ಅಥವಾ ದಂಡ ಹಾಗೂ ಸೆಕ್ಷನ್79 ಪದಪ್ರಯೋಗ ಅಥವಾ ಸಂಜ್ಙೆಗಳ ಮೂಲಕ‌ ಮಹಿಳೆಯ ಗೌರವಕ್ಕೆ ಧಕ್ಕೆಗೆ 3 ವರ್ಷದವರೆಗೆ ಸೆರೆವಾಸ ಮತ್ತು ದಂಡ ವಿಧಿಸಬಹುದು.

RELATED ARTICLES
- Advertisment -spot_img

Most Popular

error: Content is protected !!