Thursday, June 19, 2025
Google search engine
Homeರಾಜಕೀಯಹದಿನೈದು ಸಾವಿರ ಮಹಿಳೆಯರಿಗೆ ಮೋಸ; ಮೂವರ ಪೊಲೀಸ್ ಅಧಿಕಾರಿಗಳ ತಂಡ ರಚನೆ; ಸಚಿವ ಸತಿಶ ಜಾರಕಿಹೊಳಿ
spot_img

ಹದಿನೈದು ಸಾವಿರ ಮಹಿಳೆಯರಿಗೆ ಮೋಸ; ಮೂವರ ಪೊಲೀಸ್ ಅಧಿಕಾರಿಗಳ ತಂಡ ರಚನೆ; ಸಚಿವ ಸತಿಶ ಜಾರಕಿಹೊಳಿ

ಬೆಳಗಾವಿ: ಮೈಕ್ರೋ ಫೈನಾನ್ಸ್ ನಿಂದ ಸಾಲ ಪಡೆದು ಜಿಲ್ಲೆಯಲ್ಲಿ ಸುಮಾರು ಹದಿನೈದು ಸಾವಿರ ಜನ ಮಹಿಳೆಯರು ಮೋಸ ಹೋಗಿದ್ದು ಈ ಕುರಿತು ಮೂವರ ಪೊಲೀಸ್ ಅಧಿಕಾರಿಗಳ ತಂಡ ರಚಿಸಿ ತನಿಕೆಗೆ ಆದೇಶಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.

 

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಈ ಕುರಿತು ಮಾತನಾಡಿದವರು, ಮೈಕ್ರೋ ಫೈನಾನ್ಸ್ ನಿಂದ ಸುಮಾರು ಹದಿನೈದು ಸಾವಿರ ಮಹಿಳೆಯರು ಲೀಗಲ್ ಆಗಿ ಸಾಲ ಪಡೆದು, ಹೆಚ್ಚಿನ ಹಣ ಸಿಗುತ್ತದೆ ಎಂದು ಮೋಸಕ್ಕೆ ಒಳಗಾಗಿದ್ದಾರೆ. ಈ ಪ್ರಕರಣದಲ್ಲಿ ಮಹಿಳೆಯರಿಂದ ಸುಮಾರು ನೂರು ಕೋಟಿ ಹಣ ಪಡೆದಿದ್ದಾರೆ ಎಂಬ ಮಾಹಿತಿ ಇದೆ.

ಹೀಗಾಗಿ ಈಗಾಗಲೇ ಪೊಲೀಸ್ ಅಧಿಕಾರಿಗಳ ತಂಡ ತನಿಖೆಗೆ ಸೂಚಿಸಲಾಗಿದ್ದು, ಶೀಘ್ರವೇ ಸತ್ಯಾಸತ್ಯತೆ ತಿಳಿಯಲಿದೆ.

ಮಹಿಳೆಯರಿಗೆ ಮೋಸ ಮಾಡಿದ ಮಧ್ಯವರ್ತಿಗಳನ್ನು ವಶಕ್ಕೆ ಪಡೆದು ವಿಚಾರನೆ ನಡೆಸುತ್ತಾರೆ. ಆದ್ದರಿಂದ ಮೈಕ್ರೋ ಫೈನಾನ್ಸ್ ನಿಂದ ಮಹಿಳೆಯರಿಗೆ ಯಾವುದೇ ತರಹ ತೊಂದರೆ ಮಾಡಬಾರದು ಎಂದು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

RELATED ARTICLES
- Advertisment -spot_img

Most Popular

error: Content is protected !!