Thursday, October 16, 2025
Google search engine
Homeರಾಜ್ಯKSRTC ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರು ಮಕ್ಕಳ ಸಾವು !
spot_img

KSRTC ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರು ಮಕ್ಕಳ ಸಾವು !

ರಾಮನಗರ : KSRTC ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಪುಟ್ಟ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ರಾಮನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಮಾಹಿತಿ ದೊರೆತಿದೆ.

ರಾಮನಗರ-ಕನಕಪುರ ಮುಖ್ಯ ರಸ್ತೆಯಲ್ಲಿನ ಮೊಟ್ಟೆದೊಡ್ಡಿ ಗೇಟ್ ಬಳಿ ಘಟನೆ ನಡೆದಿದ್ದು. ರಾಮನಗರದ ಕಡೆಗೆ ಹೋಗುತ್ತಿದ್ದ ಬೈಕ್ ಸವಾರರ ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದ್ದು. ಡಿಕ್ಕಿಯ ರಭಸಕ್ಕೆ ಇಬ್ಬರು ಮಕ್ಕಳು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಮೃತ ಮಕ್ಕಳನ್ನು ಪ್ರತೀಕ್ (5), ಭವ್ಯ(3) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮಧು ಮತ್ತು ಗೋವಿಂದ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು. ಇವರಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ರಾಮನಗರ ತಾಲ್ಲೂಕಿನ ಅಚ್ಚಲುದೊಡ್ಡಿಯ ಇರುಳಿಗರು ಎಂದು ಗುರುತಿಸಲಾಗಿದೆ.

ಮೃತದೇಹಗಳನ್ನು ರಾಮನಗರದ ಜಿಲ್ಲಾಸ್ಪತ್ರೆಗೆ ರವಾನಿಸಿದ್ದು, ಘಟನಾ ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES
- Advertisment -spot_img

Most Popular

error: Content is protected !!