ಆರೋಪಿ ಸುಪ್ರೀತ್ ನವಲೆ ಕಲಬುರಗಿ ನಗರದ ಮುತ್ತಂಪುರ ನಿವಾಸಿಯಾಗಿದ್ದಾನೆ. ಆತನ ಕಾರನ್ನು ತಪಾಸಣೆ ನಡೆಸಿದಾಗ ನೈಟ್ರೊವೆಟ್ ಮಾತ್ರೆಗಳು ಸೇರಿದಂತೆ ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿರುವುದು ಕಂಡುಬಂದಿದೆ.
ಕಲಬುರಗಿ: ಮಾದಕ ವಸ್ತು ಕಳ್ಳಸಾಗಣೆದಾರನೊಬ್ಬನನ್ನು ಹಿಡಿಯಲು ಪ್ರಯತ್ನಿಸಿದ ಹೆಡ್‌ಕಾನ್ಸ್‌ಟೇಬಲ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಶನಿವಾರ ನಡೆದಿದೆ. ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಶರಣಪ್ಪ ತಿಳಿಸಿದ್ದಾರೆ.
ಇಂದು ಬೆಳಗ್ಗೆ ಅನುಮಾನಾಸ್ಪದ ವ್ಯಕ್ತಿಯ ಬಗ್ಗೆ ಮಾಹಿತಿ ಪಡೆದ ಇನ್ಸ್‌ಪೆಕ್ಟರ್ ಚೌಕ್ ರಾಜೇಂದ್ರ ಅವರು ಅಪರಾಧ ಪತ್ತೆ ತಂಡದೊಂದಿಗೆ ತನಿಖೆಗೆ ತೆರಳಿದರು. ಈ ವೇಳೆ ಕಾರಿನಲ್ಲಿದ್ದ ಶಂಕಿತನನ್ನು ನೋಡಿದ ಇನ್ಸ್ ಪೆಕ್ಟರ್ ಕಾರು ನಿಲ್ಲಿಸಲು ಚಾಲಕನಿಗೆ ಹೇಳಿದ್ದಾರೆ. ತಕ್ಷಣ ಶಂಕಿತನು ಕಾರಿನಿಂದ ಹೊರಬಂದು ಹೆಡ್ ಕಾನ್ಸ್‌ಟೇಬಲ್ ಗುರುಮೂರ್ತಿ ಮೇಲೆ ದಾಳಿ ಮಾಡಿದ್ದು, ಅವರು ಗಂಭೀರವಾಗಿ ಗಾಯಗೊಂಡರು ಎಂದು ಕಮಿಷನರ್ ಹೇಳಿದರು.
ಆರೋಪಿ ಸುಪ್ರೀತ್ ನವಲೆ ಕಲಬುರಗಿ ನಗರದ ಮುತ್ತಂಪುರ ನಿವಾಸಿಯಾಗಿದ್ದಾನೆ. ಆತನ ಕಾರನ್ನು ತಪಾಸಣೆ ನಡೆಸಿದಾಗ ನೈಟ್ರೊವೆಟ್ ಮಾತ್ರೆಗಳು ಸೇರಿದಂತೆ ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿರುವುದು ಕಂಡುಬಂದಿದೆ.
ಘಟನೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಮತ್ತು ಶಂಕಿತ ಆರೋಪಿ ಇಬ್ಬರೂ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಆಯುಕ್ತರು ಖಚಿತಪಡಿಸಿದ್ದಾರೆ.
ಆರೋಪಿಯು ಈಗಾಗಲೇ ಮೂರು ಎನ್‌ಡಿಪಿಎಸ್ ಪ್ರಕರಣಗಳಲ್ಲಿ (ಮಾದಕ ವಸ್ತು ಕಳ್ಳಸಾಗಣೆ) ಭಾಗಿಯಾಗಿರುವುದು ತಿಳಿದುಬಂದಿದೆ. ಆತನ ಮೂಲ ಮತ್ತು ಯಾರಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಎಂಬುದನ್ನು ಪತ್ತೆಹಚ್ಚಲು ಆತ ಚೇತರಿಸಿಕೊಂಡ ಬಳಿಕ ವಶಕ್ಕೆ ಪಡೆಯಲಾಗುವುದು ಎಂದು ಅವರು ತಿಳಿಸಿದರು.
ಹೈದರಾಬಾದ್‌ನಲ್ಲಿ ಆರೋಪಿ ವಿರುದ್ಧ ಹಲವು ಪ್ರಕರಣಗಳಿದ್ದು, ಎಲ್ಲಾದರ ಬಗ್ಗೆ ಸಂಪೂರ್ಣವಾಗಿ ತನಿಖೆ ನಡೆಸುತ್ತೇವೆ ಎಂದು ಅವರು ಹೇಳಿದರು.