Tuesday, April 29, 2025
Google search engine
Homeಅಂಕಣರಾಮೇಶ್ವರಂ ಕೆಫೆ ರೀತಿ ಗಣರಾಜ್ಯೋತ್ಸವದಂದು 6 ಗಣ್ಯರ ಮನೆ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ
spot_img

ರಾಮೇಶ್ವರಂ ಕೆಫೆ ರೀತಿ ಗಣರಾಜ್ಯೋತ್ಸವದಂದು 6 ಗಣ್ಯರ ಮನೆ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ

ಬೆಂಗಳೂರು, (ಜನವರಿ 13): ಬೆಂಗಳೂರಿನಲ್ಲಿ ಮತ್ತೊಂದು ಬಾಂಬ್ ಬೆದರಿಕೆ ಕರೆ ಬಂದಿದೆ. ರಾಮೇಶ್ವರಂ ಕೆಫೆ ರೀತಿಯಲ್ಲಿ ಬಾಂಬ್ ಬ್ಲಾಸ್ಟ್‌ ಮಾಡುವುದಾಗಿ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿದ್ದಾನೆ. ಗಣರಾಜ್ಯೋತ್ಸವದಂದು ನಗರದ ಆರು ಜನ ಗಣ್ಯರ ಮನೆ ಸ್ಪೋಟಿಸುವುದಾಗಿ ಬೆಂಗಳೂರಿನ ಪೊಲೀಸ್ ಆಯುಕ್ತರ ಕಂಟ್ರೋಲ್ ರೂಮ್ ಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಇದೀಗ ಬಂದ ಮಾಹಿತಿ ಪ್ರಕಾರ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಜನವರಿ 9 ರಂದು ಸಂಜೆ ಬೆಂಗಳೂರಿನ ಪೊಲೀಸ್ ಆಯುಕ್ತರ ಕಂಟ್ರೋಲ್ ರೂಮ್ ಗೆ ಕರೆ ಮಾಡಿದ್ದು, ರಾಮೇಶ್ವರಂ ಕೆಫೆ ರೀತಿಯಲ್ಲೇ ಬಾಂಬ್‌ ಬ್ಲಾಸ್ಟ್ ಮಾಡುವುದಾಗಿ ಹುಸಿ ಬಾಂಬ್ ಕರೆ ಬಂದಿದೆ. ಇದೊಂದು ಹುಸಿ ಬಾಂಬ್‌ ಕರೆಯಾದರೂ ಸಹ ಮುನ್ನೆಚ್ಚರಿಕೆಯಾಗಿ ವಿಧಾನಸೌಧ ಠಾಣೆ ಪೊಲೀಸರು ಪ್ರಕರಣ ದಾಖಸಿಕೊಂಡಿದ್ದಾರೆ. ಇನ್ನು ಅಪರಿಚಿತ ವ್ಯಕ್ತಿ ನೀಡಿದ ಮಾಹಿತಿ ಮೇರೆಗೆ ಆರು ಜನರ ಹೆಸರು, ವಿಳಾಸವನ್ನು ಆಯ ವ್ಯಾಪ್ತಿಯ ಪೊಲೀಸ್‌ ಠಾಣೆಗೆ ಕಳುಹಿಸಿದ್ದಾರೆ. ಇನ್ನು ಶಂಕಿತ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಗಣರಾಜ್ಯೋತ್ಸವಕ್ಕೂ ಮುನ್ನ ಬೆಂಗಳೂರು ಪೊಲೀಸ್ ಆಯುಕ್ತರ ನಿಯಂತ್ರಣ ಕೊಠಡಿಗೆ ಬಂದ ಹುಸಿ ಬಾಂಬ್ ಬೆದರಿಕೆ ಕರೆ ಭದ್ರತಾ ಕಳವಳ ಹುಟ್ಟುಹಾಕಿದೆ. ಗಣರಾಜ್ಯೋತ್ಸವ ಮುನ್ನವೇ ಈ ರೀತಿ ಬೆದರಿಕೆ ಬಂದಿದ್ದು, ಪೊಲೀಸ್ ಇಲಾಖೆಯನ್ನು ತಲ್ಲಣಗೊಳಸಿದೆ. ಹೀಗಾಗಿ ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಬೆಂಗಳೂರಿನಾದ್ಯಂತ ಭದ್ರತಾ ಕ್ರಮಗಳನ್ನು ಹೆಚ್ಚಿಸಲು ಪೊಲೀಸ್ ಇಲಾಖೆ ಮುಂದಾಗಿದೆ

RELATED ARTICLES
- Advertisment -spot_img

Most Popular

error: Content is protected !!