Thursday, June 19, 2025
Google search engine
Homeರಾಜ್ಯರಾಜಾಜಿನಗರ ಬೈಕ್ ಶೋರೂಂನಲ್ಲಿ ಬೆಂಕಿ: ಹಲವು ವಾಹನಗಳು ಅಗ್ನಿಗಾಹುತಿ
spot_img

ರಾಜಾಜಿನಗರ ಬೈಕ್ ಶೋರೂಂನಲ್ಲಿ ಬೆಂಕಿ: ಹಲವು ವಾಹನಗಳು ಅಗ್ನಿಗಾಹುತಿ

ಬೆಂಗಳೂರು: ಈ ಹಿಂದೆ ರಾಜಾಜಿನಗರದ ಎಲೆಕ್ಟ್ರಿಕ್ ಬೈಕ್ ಶೋರೂಂ ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡ ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು. ಈ ಘಟನೆ ಮಾಸುವ ಮುನ್ನವೇ ಅದೇ ಪ್ರದೇಶದಲ್ಲಿ ಮತ್ತೊಂದು ಬೈಕ್ ಶೋರೂಂಗೆ ಬೆಂಕಿ ತಗುಲಿದೆ.

ಹೌದು.. ಬೆಂಗಳೂರಿನ ರಾಜಾಜಿನಗರದ ಡಾ.ರಾಜ್‌ಕುಮಾರ್‌ ರಸ್ತೆಯಲ್ಲಿರುವ ಪ್ಲಾನೆಟ್‌ ಹೋಂಡಾ ಶೋರೂಂನಲ್ಲಿ ಇಂದು ಮಧ್ಯಾಹ್ನ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ ಮೌಲ್ಯದ ದ್ವಿಚಕ್ರವಾಹನಗಳು ಬೆಂಕಿಗಾಹುಕಿಯಾಗಿವೆ. ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ರಾಜಾಜಿನಗರ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿರುವ ಕಣ್ವ ಆಸ್ಪತ್ರೆ ಸಮೀಪದಲ್ಲಿರುವ ಶುಕ್ರ ಮೋಟರ್‌ರ‍ಸನ ಓಕಿನೋವಾ ಎಲೆಕ್ಟ್ರಿಕಲ್‌ ಬೈಕ್‌ ಶೋ ರೂಂನಲ್ಲಿ ಬೆಂಕಿ ಕಾಣಿಸಿಕೊಂಡು ನೋಡನೋಡುತ್ತಿದ್ದಂತೆ ಇಡೀ ಕಟ್ಟಡವನ್ನೇ ಬೆಂಕಿ ಆವರಿಸಿಕೊಂಡ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಬೈಕ್‌ಗಳು ಬೆಂಕಿಗಾಹುತಿಯಾಗಿವೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಶೋರೂಂನಲ್ಲಿದ್ದ ಸಿಬ್ಬಂದಿಗಳು ಹೊರಗೆ ಓಡಿಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಬಳಿಕ ಪೊಲೀಸರಿಗೆ ಮತ್ತು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಅಗ್ನಿ ಅವಘಡ ಹಿನ್ನಲೆಯಲ್ಲಿ ಅಗ್ನಿಶಾಮಕ ವಾಹನಗಳು ರಸ್ತೆಯಲ್ಲಿ ನಿಂತಿದ್ದರಿಂದ ಈ ಮಾರ್ಗದಲ್ಲಿ ಕಿಲೋಮೀಟರ್‌ಗಟ್ಟಲೆ ಸಂಚಾರದಟ್ಟಣೆ ಉಂಟಾಗಿತ್ತು. ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

RELATED ARTICLES
- Advertisment -spot_img

Most Popular

error: Content is protected !!