Thursday, June 19, 2025
Google search engine
Homeಕ್ರೈಂHubballi: ಯುವಕನ ಕೊಲೆ, ಮೂವರು ಆರೋಪಿಗಳ ಮೇಲೆ ಫೈರಿಂಗ್; ತಡರಾತ್ರಿ ಹುಬ್ಬಳ್ಳಿಯಲ್ಲಿ ಆಗಿದ್ದೇನು?
spot_img

Hubballi: ಯುವಕನ ಕೊಲೆ, ಮೂವರು ಆರೋಪಿಗಳ ಮೇಲೆ ಫೈರಿಂಗ್; ತಡರಾತ್ರಿ ಹುಬ್ಬಳ್ಳಿಯಲ್ಲಿ ಆಗಿದ್ದೇನು?

ಹುಬ್ಬಳ್ಳಿ; ನಗರದ ಲಿಂಗರಾಜ ನಗರದಲ್ಲಿರುವ ಗೋಲ್ಡನ್ ಹೈಟ್ಸ್ ಬಾರ್ ಪಾರ್ಕಿಂಗ್ ಜಾಗದಲ್ಲಿ ಆಕಾಶ ವಾಲ್ಮೀಕಿ ಎಂಬ ಯುವಕನ್ನು ಬರ್ಬರವಾಗಿ ಕೊಚ್ಚಿ ಕೊಲೆ (Murder) ಮಾಡಲಾಗಿದೆ. ತಡರಾತ್ರಿ ನಡೆದ ಕೊಲೆ ಬಗ್ಗೆ ಮಾಹಿತಿ ಪಡೆದ ಪೊಲೀಸರು (Police) ಆರೋಪಿಗಳನ್ನು ಬಂಧಿಸಲು ತೆರಳಿದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ವೇಳೆ ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ ಪೊಲೀಸರು (Police firing) ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ (Arrest).

ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ ಮಾಡಲಾಗಿದ್ದು, ಹಳೇ ವೈಷಮ್ಯದ ಹಿನ್ನೆಲೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದೆ. ಇನ್ನು ಯುವಕನನ್ನು ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿಗಳನ್ನು ಬೆನ್ನಟ್ಟಿದ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸರ ಮೇಲೆ ಹಲ್ಲೆಗೆ ಯತ್ನ

ಪೊಲೀಸರು ಮೂವರು ಕೊಲೆ ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದು, ಇಬ್ಬರ ಎರಡೂ ಕಾಲಿಗೆ ಮತ್ತು ಓರ್ವನ ಒಂದು ಕಾಲಿಗೆ ಗುಂಡು ಹಾರಿಸಿದ್ದಾರೆ. ಲಿಂಗರಾಜ ನಗರದಲ್ಲಿ ತಡ ರಾತ್ರಿ ಯುವಕ ಆಕಾಶ್ ವಾಲ್ಮೀಕಿಯನ್ನು ಕೊಲೆ ಮಾಡಿದ್ದ ಆರೋಪಿಗಳು ಎಸ್ಕೇಪ್ ಆಗಿದ್ದರು. ಬಂಧಿಸಲು ಹೋದಾಗ ಪೊಲೀಸರ ಮೇಲೆ ದಾಳಿ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಆರೋಪಿಗಳ ಮೇಲೆ ಫೈರಿಂಗ್ ಮಾಡಲಾಗಿದೆ.

ನಾಲ್ವರು ಪೊಲೀಸ್ ಸಿಬ್ಬಂದಿಗೆ ಗಾಯ

ಇತ್ತ ಘಟನೆಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಭೇಟಿ ನೀಡಿ ಗಾಯಗೊಂಡಿರುವ ಪೊಲೀಸರ ಆರೋಗ್ಯ ವಿಚಾರಿಸಿದ್ದಾರೆ. ನಂತರ ಗುಂಡೇಟು ತಿಂದ ಆರೋಪಿಗಳನ್ನೂ ಪರಿಶೀಲಿಸಿದ್ದಾರೆ. ಇನ್ನು ಘಟನೆ ಕುರಿತು ಮಾತನಾಡಿದ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್, ಹಳೆ ದ್ವೇಷದ ಹಿನ್ನೆಲೆಯಲ್ಲಿ ಆಕಾಶ್ ಎಂಬ ಯುವಕನ ಕೊಲೆ ಮಾಡಲಾಗಿದೆ. ವ್ಯವಸ್ಥಿತವಾಗಿ ಪ್ಲ್ಯಾನ್ ಮಾಡಿ ಕೊಂದಿದ್ದಾರೆ ಎಂದು ತಿಳಿಸಿದರು.

ಆರೋಪಿಗಳು ತಪ್ಪಿಸಿಕೊಳ್ಳಲು ಎಂಟಿಎಸ್ ಕಾಲೋನಿಯಲ್ಲಿ ಸೇರಿದ್ದರು. ಈ ವೇಳೆ ಪೊಲೀಸರು ಬಂಧನಕ್ಕೆ ಪ್ರಯತ್ನಿಸಿದ್ದರು. ಆದರೆ, ಪೊಲೀಸರ ಮೇಲೆ ದಾಳಿ ಮಾಡಿದ್ರು. ಪೊಲೀಸರು ಮೂವರ ಮೇಲೆ ಫೈರಿಂಗ್ ಮಾಡಿದ್ದಾರೆ. ಅಭಿಷೇಕ್, ಯಲ್ಲಪ್ಪ ಮತ್ತು ವಿನೋದ್ ಎಂಬ ಆರೋಪಿಗಳ ಮೇಲೆ ಫೈರಿಂಗ್ ಮಾಡಲಾಗಿದೆ. ಮೃತ ಆಕಾಶ್ ಮೇಲೆ ಒಂದು ಪ್ರಕರಣ ದಾಖಲಾಗಿತ್ತು. ಆಗಾಗ ಎರಡೂ ಗುಂಪುಗಳ ನಡುವೆ ಗಲಾಟೆ ನಡೆಯುತ್ತಿತ್ತು ಎಂಬ ಮಾಹಿತಿ ಇದೆ. ಕಳೆದ ಶಿವರಾತ್ರಿ ದಿನ ಗಲಾಟೆ ನಡೆದಿತ್ತು. ಅದೇ ದ್ವೇಷದ ಹಿನ್ನೆಲೆಯಲ್ಲಿ ಆರೋಪಿಗಳು ಕೊಲೆ ಮಾಡಿದ್ದಾರೆ. ಸದ್ಯ ಮೂವರು ಆರೋಪಿಗಳನ್ನು ಬಂಧಿಸಿದ್ದು, ಉಳಿದವರ ಬಂಧನಕ್ಕೆ ಜಾಲ ಬೀಸಿದ್ದೇವೆ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾಹಿತಿ ನೀಡಿದರು.

 

RELATED ARTICLES
- Advertisment -spot_img

Most Popular

error: Content is protected !!