ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ರಾಯಬಾಗ ಸೇರಿದಂತೆ ಹಲವು ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆ ಕಾಲಕ್ಕೂ ಮುನ್ನವೇ ವಿದ್ಯುತ್ ಕಡಿತಕ್ಕೆ ಬೇಸತ್ತು ರೈತರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿಯ 110 ಕೆವಿ ವಿದ್ಯುತ್ ಸರಬರಾಜು ಕೇಂದ್ರಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.
ಚಿಕ್ಕೋಡಿ, ರಾಯಬಾಗ ಸೇರಿದಂತೆ ಬಹುತೇಕ ಗ್ರಾಮೀಣ ಪ್ರದೇಶಗಳಲ್ಲಿ ಲೋಡ್ ಶೆಡ್ಡಿಂಗ್..?
ಹಗಲು ಹೊತ್ತು 3 ತಾಸು, ರಾತ್ರಿ ಹೊತ್ತು ಕೇವಲ ಒಂದು ತಾಸುಗಳ ಕಾಲ ವಿದ್ಯುತ್ ನೀಡುತ್ತಿರುವ ಹೆಸ್ಕಾಂ ಇದರಿಂದ ಬೇಸತ್ತ ರೈತರು ಯಾವ ರೀತಿಯಲ್ಲಿ ಜಮೀನುಗಳಲ್ಲಿ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಪ್ರಶ್ನೆ ಮಾಡಿದರು.
ಈ ವಿದ್ಯುತ್ ಕಣ್ಣುಮುಚ್ಚಾಲೆಯಿಂದ ಬೇಸತ್ತ ಬೆಳಕೂಡ ಗ್ರಾಮಸ್ಥರು.ನಾಗರಮುನ್ನೋಳಿಯ 110 ಕೆವಿ ವಿದ್ಯುತ್ ಕೇಂದ್ರಕ್ಕೆ ಮುತ್ತಿಗೆ ಹಾಕಿದ ರೈತರು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೆಳಕೂಡ ಗ್ರಾಮ. ವಿದ್ಯುತ್ ಕೇಂದ್ರದ ಅಧಿಕಾರಿಗಳು ತರಾಟೆಗೆ ತೆಗೆದುಕೊಂಡ ಬೆಳಕೂಡ ರೈತರು.