ಬೆಳಗಾವಿ: ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಪೂರೈಸಲು ರಾಜ್ಯದಲ್ಲಿ ಗ್ರಾಮ ಆಡಳಿತಾಧಿಕಾರಿಗಳ 2 ನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಕಳೆದು ದಿನಗಳಿಂದ ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲ್ಲೂಕಿನ ಗ್ರಾಮ ಆಡಳಿತಾಧಿಕಾರಿಗಳು ಬೆಳಗಾವಿ ತಹಶಿಲ್ದಾರರ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.
ರೈತ ಸಂಘಟನಯ ಅಧ್ಯಕ್ಷರಾದ ಬಸವರಾಜ ಡೊಂಗರಗಾವಿ ಅವರು ಮಾತನಾಡಿ ಸರ್ಕಾರವು ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳನ್ನು ಈಡೇರಿಸಿ ಅವರನ್ನು ಮರಳಿ ಹಳ್ಳಿಗಳಲ್ಲಿ ಕೆಲಸಕ್ಕೆ ಹಾಜರಾಗಲು ಘನ ಸರಕಾರ ಅನುವು ಮಾಡಿ ಕೊಡಬೇಕು ಇಲ್ಲ ಅಂದರೆ ಮುಂದಿನ ದಿನಗಳಲ್ಲಿ ಗ್ರಾಮದಲ್ಲಿನ ಎಲ್ಲ ರೈತರು ಬಂದು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬೆಳಗಾವಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು, ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.