ಬೆಳಗಾವಿ: ಎಂಇಎಸ್ ನಿಷೇಧ ಹಾಗೂ ಪುಂಡಾಟ ಖಂಡಿಸಿ ಇಂದು ಕರ್ನಾಟಕ ಬಂದ್ ಹಿನ್ನೆಲೆ ಕರ್ನಾಟಕ ರಕ್ಷಣಾ ವೇದಿಕೆ ಕರವೇ ಕಾರ್ಯಕತರು ಪ್ರತಿಭಟನೆ ನಡೆಸಿದರು.
ಬೆಳಗಾವಿ ಸರ್ಕಿಡೋಸ್ ಸಂಗೊಳ್ಳಿ ರಾಯಣ್ಣ ವೃತ್ತದ ಮಾರ್ಗವಾಗಿ ಚೆನ್ನಮ್ಮ ವೃತ್ತದವರೆಗೆ ಪ್ರತಿಭನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಇದಕ್ಕೂ ಮುನ್ನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಎಂಇಎಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.ಬಳಿಕ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟಿಸಿದ ಎಂಇಎಸ್ ನಿಷದ ಮಾಡುವಂತೆ ಆಗ್ರಹಿಸಿದರು.
ಮುಂಜಾಗ್ರತೆ ಕ್ರಮವಾಗಿ ನಗರದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲ್ಲಾಗಿತು.ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತ ವಾಗಿದು ಸಾರಿಗೆ ಸಂಚಾರ ಅಂಗಡಿ ಮುಗಟು ಕಾರ್ಯ ನಿರಸುತ್ತಿದವು ಕರ್ನಾಟಕ ಗಡಿ ವರೆಗು ಬಸ್ ಸಂಚಾರ ಸುಗಮವಾಗಿ . ಮುಂಜಾಗ್ರತೆ ಕ್ರಮವಾಗಿ ಮಹಾರಾಷ್ಟ್ರ ಬಸ್ ಗಳನ್ನು ಗಡಿ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು.
ಇದೇ ವೇಳೆ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಬೆಳಗಾವಿ ಜಿಲ್ಲಾ ಅಧ್ಯಕ್ಷ ವಾಜೀದ್ ಹಿರೇಕುಡಿ ಮಾತನಾಡಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಕರ್ನಾಟಕ ಸರಕಾರಕ್ಕೆ ಮನವಿ ಸಲ್ಲಿಸಿದರೂ ಒಂದು ವೇಳೆ ನಿಷೇಧ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಚ್ಚರಿಕೆ ನೀಡಿದರು.
ಕರ್ನಾಟಕ ರಕ್ಷಣಾ ವೇದಿಕೆ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು .