ಬೆಳಗಾವಿ : ಏಪ್ರೀಲ್ 1 ರಿಂದ ಹೊಸ ಆರ್ಥಿಕ ವರ್ಷವು ಪ್ರಾರಂಭವಾಗಿದ್ದು, ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ನರೇಗಾ ಯೋಜಯಡಿ ಕೂಲಿ ಪಡೆದುಕೊಂಡು ನರೇಗಾ ಯೋಜನೆಯ ಸದಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ರವಿ ಎನ್ ಬಂಗಾರೆಪ್ಪನವರ ಹೇಳಿದರು.
ತಾಲ್ಲೂಕಿನ ಬಸ್ತವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ನಾಲಾ ಹೂಳ ಎತ್ತುವ ಕಾಮಗಾರಿ ಸ್ಥಳದಲ್ಲಿ ನರೇಗಾ ಕೂಲಿ-ಕಾರ್ಮಿಕರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ನೀಡಿ ಅವರು ಮಾತನಾಡಿದರು.
ಇದೆ ಮಾಹೆಯಿಂದ ವಿಶೇಷ ಚೇತನರ ನೋಂದಣಿ ಅಭಿಯಾನ ಪ್ರಾರಂಭವಾಗಿದ್ದು, ಗ್ರಾಮ ಪಂಚಾಯತಿ ಅವರು ವಿಶೇಷ ಚೇತನರ ಭಾಗವಹಿಸುಕೆ ಹೆಚ್ಚಿಸುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ನಂತರ ಧಾಮಣೆ ಎಸ್. ಹಾಗೂ ಯಳ್ಳೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ ನೀಡಿದರು.
ಈ ಸಂದರ್ಭದಲ್ಲಿ ಬೆಳಗಾವಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಿ.ಎಮ್. ಬನ್ನೂರ, ಡಿಐಇಸಿ ಸಂಯೋಜಕ ಪ್ರಮೋದ ಗೋಡೆಕರ, ತಾಂತ್ರಿಕ ಸಂಯೋಜಕ ಮುರುಗೇಶ ಯಕ್ಕಂಚ್ಚಿ, ತಾಐಇಸಿ ಸಂಯೋಜಕ ರಮೇಶ ಮಾದರ, ಪಿಡಿಒ, ತಾಂತ್ರಿಕ ಸಹಾಯಕರು ಹಾಗೂ ಗ್ರಾಮ ಪಂಚಾಯತ ಸಿಬ್ಬಂದಿಗಳು ಇದ್ದರು.