ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ (ಫೆ.05) ಸರ್ದಾರ ಹೈಸ್ಕೂಲ್ ಮೈದಾನದಲ್ಲಿ ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಸರ್ಕಾರದ ಶಕ್ತಿ, ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹ ಜ್ಯೋತಿ ಮತ್ತು ಯುವನಿಧಿ ಗ್ಯಾರಂಟಿ ಯೋಜನೆಗಳನ್ನು ಸಮಪರ್ಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಸಮಾವೇಶ ಸಮಾರಂಭ ನಡೆಯಲಿದೆ.
ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಕಾರ್ಯಕ್ರಮದ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಆಗಮಿಸಲಿದ್ದಾರೆ.
ಬೆಳಗಾವಿ ಉತ್ತರ ವಿಧಾನ ಸಭಾ ಮತ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶೇಷ ಆಮಂತ್ರಿತರಾಗಿ ಕರ್ನಾಟಕ ವಿಧಾನಸಭೆ ಸರ್ಕಾರಿ ಮುಖ್ಯ ಸಚೇತಕ ಅಶೋಕ ಪಟ್ಟಣ, ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ -2 ಪ್ರಕಾಶ ಹುಕ್ಕೇರಿ, ವಾಯುವ್ಯ ಸಾರಿಗೆ ನಿಗಮ ನಿಯಮಿತ ಅಧ್ಯಕ್ಷರಾದ ಭರಮಗೌಡ ಕಾಗೆ, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷ ಮಹಾಂತೇಶ ಕೌಜಲಗಿ ಅವರು ಇರಲಿದ್ದಾರೆ.
ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಸಂಜಯ ಬಿ. ಶೆಟ್ಟೆಣ್ಣವರ, ನಗರ ಉತ್ತರ ವಲಯದ ಪೊಲೀಸ್ ಮಹಾನಿರೀಕ್ಷಕ ವಿಕಾಶ ಕುಮಾರ ವಿಕಾಶ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ನಗರ ಪೊಲೀಸ್ ಆಯುಕ್ತ ಎಸ್. ಎನ್ ಸಿದ್ದರಾಮಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು
ಪ್ರಕಟಣೆಯಲ್ಲಿ ತಿ
ಳಿಸಲಾಗಿದೆ.