ಬೆಳಗಾವಿ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಬೆಳಗಾವಿ ವಿದ್ಯಾರ್ಥಿನಿ ರಾಜ್ಯಕ್ಕೆ ತೃತೀಯ ಸ್ಥಾನ ಗಳಿಸಿದ್ದಾರೆ.
ಕರ್ನಾಟಕ ಕಾನೂನು ಸಂಸ್ಥೆಯ ಗೋಗಟೆ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗ ತನ್ವಿ ಹೇಮಂತ ಪಾಟೀಲ ಅವರಿಗೆ ಮೂರನೇ ರ್ಯಾಂಕ್ ಗಳಿಸಿದ್ದಾರೆ.
ಒಟ್ಟು 600 ಅಂಕಗಳ ಪೈಕಿ ತನ್ವಿ ಪಾಟೀಲ 597 ಅಂಕ ಪಡೆದಿದ್ದಾರೆ. ಇಂಗ್ಲೀಷ 97, ಹಿಂದಿ 100, ಅರ್ಥಶಾಸ್ತ್ರ 100, ಲೆಕ್ಕಶಾಸ್ತ್ರ 100, ವ್ಯವಹಾರ ಅಧ್ಯಯನ 100, ಸಂಖ್ಯಾಶಾಸ್ತ್ರ 100 ಅಂಕ ಗಳಿಸಿದ್ದಾರೆ.
ರಾಜ್ಯಕ್ಕೆ ಮೂರನೇ ಸ್ಥಾನ ಬಂದ ಸುದ್ದಿ ತಿಳಿಯುತ್ತಿದ್ದಂತೆ ತನ್ವಿ ತಂದೆ-ತಾಯಿ ಮತ್ತು ಕಾಲೇಜು ಪ್ರಾಧ್ಯಾಪಕರ ಸಂತಸಕ್ಕೆ ಪಾರವೇ ಇರಲಿಲ್ಲ. ಸಿಹಿ ತಿನ್ನಿಸಿ ಸಂಭ್ರಮಿಸಿದರು.