ಬೆಳಗಾವಿ: ವಿಕಲಚೇತನರ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್ ಅವರಿಗೆ 2023ರ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಲಭಿಸಿದೆ.
ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಸೋಮವಾರ (ಏ.21) ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಇಲಾಖೆಯ ಸೇವೆಯಲ್ಲಿ ಶ್ರದ್ಧೆ, ಪರಿಶ್ರಮ, ಕಾಯಕ ನಿಷ್ಠೆ, ಕ್ರಿಯಾಶೀಲ ಮತ್ತು ಸೇವಾ ಮನೋಭಾವನೆಯನ್ನು ಪರಿಗಣಿಸಿ ರಾಜ್ಯ ಮಟ್ಟದ ಸರ್ವೋತ್ತಮ ಪ್ರಶಸ್ತಿಗೆ ಭಾಜನರಾಗಿರುತ್ತಾರೆ.