ಬೆಳಗಾವಿ: ಬೆಳಗಾವಿಯಲ್ಲಿ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಎಂಇಎಸ್ ಸೃತಿಭವನ ನಿರ್ಮಾಣಕ್ಕೆ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಗುರುವಾರ ಪ್ರತಿಭಟನೆ ನಡೆಯಿತು.
ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ವಾಟಾಳ ಪ್ರತಿಭಟನೆಗೆ ಮುಂದಾಗುತ್ತಿದ್ದಂತೆ ವಾಟಾಳ್ ರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಪೊಲೀಸರ ವಿರುದ್ಧ ದಿಕ್ಕಾರ ಕೂಗಿ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು.
ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟಿದ್ದ ವಾಟಾಳ್ ನಾಗರಾಜ್ ರನ್ನು ಚನ್ನಮ್ಮ ವೃತ್ತದಲ್ಲಿಯೇ ವಾಟಾಳರನ್ನು ವಶಕ್ಕೆ ಪಡೆದ ಪೊಲೀಸರ ವಿರುದ್ಧ ಆಕ್ರೋಶ ಹೊರ ಹಾಕಿದರು ಎಂಇಎಸ್ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು.bಮರಾಠಿಗರ ಏಂಜಟರಾ ನೀವು ಎಂದು ಪೊಲೀಸರಿಗೆ ವಾಟಾಳ್ ಪ್ರಶ್ನೆ. 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು