ಬೆಳಗಾವಿ: ಬೆಳಗಾವಿಯಲ್ಲಿ ಗಾಳಿ ಸಹಿತ ಸುರಿದ ಧಾರಾಕಾರವಾಗಿ ಮಳೆಯಿಂದಾಗಿ ಬೆಳಗಾವಿಯ ಸಾಂಬ್ರಾ ರಸ್ತೆ ಮಧ್ಯ ಬೃಹತ್ ಗಾತ್ರದ ಮರ ಒಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ ಮೇಲೆ ಉರಿಳಿ ಬಿದ್ದಿರುವ ಘಟನೆ ಶುಕ್ರವಾರ ನಡೆದಿದೆ.
ಧಾರಾಕಾರ ಮಳೆ ಗಾಳಿಯಿಂದಾಗಿ ಬಸ್ ಮೇಲೆ ಮರ ಉರುಳಿ ಬಿದ್ದಿದ್ದು, ಸದ್ಯ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಪ್ರಯಾಣಿಕರಿಗೆ ಯಾವುದೇ ಪ್ರಾಣ ಹಾನಿ ಆಗಿಲ್ಲ. ಸದ್ಯ ಸ್ಥಳಕ್ಕೆ ಆಗಮಿಸಿದ ಸಂಬಂಧಪಟ್ಟವರು ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.