Thursday, June 19, 2025
Google search engine
Homeಸುದ್ದಿಜಿಲ್ಲಾ ಪೊಲೀಸ್ ಇಲಾಖೆ ಫೆ.25 ರಂದು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗಾಗಿ ಲಿಖಿತ ಪರೀಕ್ಷೆ
spot_img

ಜಿಲ್ಲಾ ಪೊಲೀಸ್ ಇಲಾಖೆ ಫೆ.25 ರಂದು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗಾಗಿ ಲಿಖಿತ ಪರೀಕ್ಷೆ

ಧಾರವಾಡ (ಕರ್ನಾಟಕ ವಾರ್ತೆ)ಫೆ.೧೩: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್)(ಪುರುಷ ಮತ್ತು ಮಹಿಳಾ) & (ತೃತೀಯ ಲಿಂಗ ಪುರಷ ಮತ್ತು ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್‌ಲಾಗ್-೧೧೩೭ ಹುದ್ದೆಗಳಿಗೆ ಲಿಖಿತ ಪರೀಕ್ಷಯನ್ನು ಫೆಬ್ರವರಿ ೨೫, ೨೦೨೪ ರಂದು ಬೆಳಿಗ್ಗೆ ೧೧ ರಿಂದ ೧೨:೩೦ ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುವುದು.

ಆದ್ದರಿಂದ, ಸದರಿ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆ ಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್.ಎಂ.ಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್‌ಅನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದAದು ಲಿಖಿತ ಪರೀಕ್ಷೆಗೆ ಹಾಜರಾಗಲು ಸೂಚಿಸಿದೆ ಹಾಗೂ ಸದರಿ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಈ ಕೆಳಕಂಡ ವಸ್ತç ಸಂಹಿತೆಯನ್ನು ಪಾಲಿಸತಕ್ಕದ್ದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ಗಳನ್ನು ಧರಿಸುವುದು, ಜಿಪ್ ಪ್ಯಾಕೆಟ್‌ಗಳು ದೊಡ್ಡ ಬಟನ್‌ಗಳು ಇರುವ ಶರ್ಟ್ಗಳನ್ನು ಧರಿಸತಕ್ಕದ್ದಲ್ಲ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‌ಗಳನ್ನು ಧರಿಸತಕ್ಕದ್ದಲ್ಲ. ಪರೀಕ್ಷಾ ಕೇಂದ್ರದೊಳಗೆ ಷೂಗಳನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸಿರಬೇಕು. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇದಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬೂಚಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು, ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಅಭ್ಯರ್ಥಿಗಳು ಧರಿಸುವಂತೆ ನಿರ್ದೇಶಿಸಲಾಗಿದೆ.
ಎತ್ತರವಾದ ಹಿಮ್ಮಡಿಯ ಶೂಗಳನ್ನು, ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.
ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ, ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -spot_img

Most Popular

error: Content is protected !!