ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಲಕ್ಷ್ಮಣ್ ಮಾದರ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ ಎಂಬ ಆರೋಪ ಕುನ್ನಾಳ ಗ್ರಾಮದಲ್ಲಿ ಕೇಳಿ ಬಂದಿದೆ.
ಓಕಳಿಯಲ್ಲಿ ದಲಿತ ಮಹಿಳೆಯರ ಮೇಲೆ ನೀರು ಎರಚಿದ್ದನ್ನ ಪ್ರಶ್ನಿಸಿದಕ್ಕೆ ಕುನ್ನಾಳ ಗ್ರಾಮದ ಲಕ್ಷ್ಮಣ್ ಮಾದರ ಎಂಬಾತನ ಮೇಲೆ ಕಬ್ಬಿನದ ರಾಡ್ ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.
ಈ ಘಟನೆಯ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗಿದೆ. ತೀವ್ರ ಗಾಯಗೊಂಡ ಯುವಕನಿಗೆ ಗೋಕಾಕನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದು ರಾಮದುರ್ಗ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.