Thursday, October 16, 2025
Google search engine
Homeರಾಜ್ಯಕಾಂಗ್ರೆಸ್ ಸರ್ಕಾರ ವಸೂಲಿ ಸರ್ಕಾರ : ಸುಭಾಷ ಪಾಟೀಲ
spot_img

ಕಾಂಗ್ರೆಸ್ ಸರ್ಕಾರ ವಸೂಲಿ ಸರ್ಕಾರ : ಸುಭಾಷ ಪಾಟೀಲ

ಬೆಳಗಾವಿ: ಕಳೆದ ಎರಡು ವರ್ಷಗಳ ಕಾಂಗ್ರೆಸ್ ಸರ್ಕಾರ ಆಡಳಿತ ರಾಜ್ಯವನ್ನು ಹಿಂದೆಂದೂ ಕಾಣದ ದುಸ್ಥಿತಿಗೆ ದೂಡಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಸುಭಾಷ ಪಾಟೀಲ ಆರೋಪಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಇದು ಆಡಳಿತ ನಡೆಸುವ ಸರ್ಕಾರವಲ್ಲ, ಕೇವಲ ವಸೂಲಿ ಸರ್ಕಾರ.ಕಾಂಗ್ರೆಸ್ ಆಡಳಿತ ಕನ್ನಡಿಗರ ಬದುಕಿಗೆ ಶಾಪವಾಗಿದೆ. ಜನನ ಪ್ರಮಾಣಪತ್ರದಿಂದ ಮರಣ ಪ್ರಮಾಣಪತ್ರದವರೆಗೂ ಪ್ರತಿಯೊಂದರಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ನೆಮ್ಮದಿಯಿಂದ ಬದುಕಲು ಅಥವಾ ಸಾಯಲು ಸಹ ಬಿಡದ ಕ್ರೂರ ಭ್ರಷ್ಟತೆ ರಾಜ್ಯವನ್ನು ಆವರಿಸಿದೆ

ರಾಜ್ಯ ಇಂದು ಆರ್ಥಿಕ ದಿವಾಳಿ, ಶೂನ್ಯ ಅಭಿವೃದ್ಧಿ, ಕುಸಿದ ಕಾನೂನು ಸುವ್ಯವಸ್ಥೆ, ಸಾಮಾಜಿಕ ನ್ಯಾಯದ ಕಗ್ಗೋಲೆ ಮತ್ತು ವ್ಯಾಪಕ ಭ್ರಷ್ಟಾಚಾರದಿಂದ ನರಳುತ್ತಿದೆ. ಇದು ಜನಾದೇಶಕ್ಕೆ ಮಾಡಿದ ದ್ರೋಹ ಮತ್ತು ರಾಜ್ಯಕ್ಕೆ ತಂದ ಅಪಚಾರ ಎಂದರು.

ಕಾಂಗ್ರೆಸ್ ಸರ್ಕಾರ ಎಂದರೆ ಭ್ರಷ್ಟಾಚಾರದ ಕೂಪ. ಇದು ಸ್ಪಷ್ಟವಾಗಿ “ಕಮಿಷನ್ ಸರ್ಕಾರ”, “60% ಸರ್ಕಾರ” ಪ್ರತಿಯೊಂದು ಯೋಜನೆಯಲ್ಲೂ, ಪ್ರತಿ ಟೆಂಡರ್‌ನಲ್ಲೂ ಕಮಿಷನ್ ದಂಧೆ ನಡೆಯುತ್ತಿದೆ. ರಾಜ್ಯವನ್ನು ಕಾಂಗ್ರೆಸ್ ಪಕ್ಷದ “ಎಟಿಎಂ” ಆಗಿ ಪರಿವರ್ತಿಸಿದ್ದಾರೆ. ಕರ್ನಾಟಕದಲ್ಲಿ ಲೂಟಿ ಮಾಡಿದ ಕೋಟ್ಯಂತರ ಹಣವನ್ನು ಪಕ್ಷದ ಹೈಕಮಾಂಡ್‌ಗೆ ಮತ್ತು ಇತರ ರಾಜ್ಯಗಳ ಚುನಾವಣೆಗಳಿಗೆ ಅಕ್ರಮವಾಗಿ ಸಾಗಿಸುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಆರ್ಥಿಕ ದಿವಾಳಿಯ ಅಂಚಿನಲ್ಲಿದೆ. ಕಾಂಗ್ರೆಸ್ ಸರ್ಕಾರದ ದುರಾಡಳಿತ ಮತ್ತು ವ್ಯಾಪಕ ಭ್ರಷ್ಟಾಚಾರದಿಂದಾಗಿ ರಾಜ್ಯದ ಹಣಕಾಸು ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂದು ಸ್ವತಃ ಉಪಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದಾರೆ. ಸರ್ಕಾರದ ಜನವಿರೋಧಿ ನೀತಿಗಳಿಂದಾಗಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಹಾಲು, ನೀರು, ವಿದ್ಯುತ್, ಡೀಸೆಲ್ ಬೆಲೆ ಏರಿಕೆ, ವಿವಿಧ ತೆರಿಗೆ ಮತ್ತು ಶುಲ್ಕಗಳ ವಿಪರೀತ ಹೆಚ್ಚಳದಿಂದಾಗಿ ಬಡವರು ಮತ್ತು ಮಧ್ಯಮ ವರ್ಗದ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ.

ಇದೆ ವೇಳೆ ಮಾತನಾಡಿದ ಮಾಜಿ ಶಾಸಕ ಸಂಜಯ ಪಾಟೀಲ ಇದು ಸಾಧನ ಸಮಾವೇಶವಲ್ಲ ಇದು ಕಾಂಗ್ರೆಸ್ ಅವರು  ಸ್ವಂತ ಆಸ್ತಿ ಮಾಡಿಕೊಂಡಿರುವ ಸಂಪಾದನಾ ಸಮಾವೇಶ  ಎಂದು ಆರೋಪಿಸಿದರು.

ಕರ್ನಾಟದಲ್ಲಿ 50 ವರ್ಷದ ಇತಿಹಾಸದಲ್ಲಿ ಹನಿ ಟ್ರ್ಯಾಪ್  ಅಂತಹ ವಿಷಯವನ್ನು ಯಾವುದೇ ಸಚಿವರು ಮಾತನಾಡಿದು ನಾವು ಕೇಳಿಲ್ಲ .ಆದರೆ ಕಾಂಗ್ರೆಸ್ ಸಚಿವರು ಹೇಳುತ್ತಿದ್ದಾರೆ ಹನಿ ಟ್ರ್ಯಾಪ್ ನಡಿಯುತ್ತಿದೆ ಆದರೆ ಕಾಂಗ್ರೆಸ್ ಪಕ್ಷದ ಜನರು ಮಾಡುತ್ತಿದ್ದಾರೆ ಎಂದು ಆರೋಪ ಮಾಡುವಂತ ಹಾಗೂ ವಿಧಾನಸಭೆಯಲ್ಲಿ ಚರ್ಚೆ ಆಗುವಂತ ಸಂದರ್ಭ ದೇಶ ಸ್ವಾತಂತ್ರ ಆದಾಗಿನಿಂದ ಕರ್ನಾಟಕದಲಿ ಮಾತ್ರಾ ಅಲ್ಲ ಇಡೀ ದೇಶದಲ್ಲಿ  ಮೊದಲನೇ ಬಾರಿ ಆಗಿರುವುದನ್ನು ನಾವು ನೋಡುತ್ತಿದ್ದೇವೆ ಎಂದರು.

ರಾಜ್ಯದಲ್ಲಿ ಹಗರಣಗಳು, ಭ್ರಷ್ಟಾಚಾರ, ಅಗತ್ಯ ವಸ್ತಗಳು, ಬೆಲೆ ಏರಿಕೆ, ರೈತರ ಆತ್ಮಹತ್ಯೆ ಪ್ರಕರಣಗಳು ಕಂಡುಕೇಳರಿಯದ ರೀತಿಯಲ್ಲಿ ಹೆಚ್ಚುತ್ತಿವೆ.ಇವುಗಳನ್ನ ತಡೆಯುವ ಬದಲು ರಾಜ್ಯ ಕಾಂಗ್ರೆಸ್ ಸರ್ಕಾರ ಯಾವ ಆಧಾರದ ಮೇಲೆ ಸಾಧನಾ ಸಮಾವೇಶ ಮಾಡುತ್ತಿದೆ ಎಂದು ಸಂಜಯ ಪಾಟೀಲ್ ಪ್ರಶ್ನಿಸಿದರು. ಯುದ್ಧದ ಸಮಯದಲ್ಲೂ ಒಗ್ಗಟ್ಟಾಗಿರುವ ಮನೋಭಾವ ಕಾಂಗ್ರೆಸ್ ಪಕ್ಷಕ್ಕಿಲ್ಲ. ಕಾಂಗ್ರೆಸ್ ಪಕ್ಷ ಒಂದು ಜಾತಿಗೆ ಸೀಮಿತವಾದ ಪಕ್ಷ. ಭಾರತದಲ್ಲಿರುವ ಎಲ್ಲರನ್ನೂ  ಸಮಾನವಾಗಿ ಸರ್ಕಾರ ಕಾಣುವಂತಾಗಬೇಕು ಎಂದು ಸಂಜಯ ಪಾಟೀಲ ಹೇಳಿದರು.

 

RELATED ARTICLES
- Advertisment -spot_img

Most Popular

error: Content is protected !!