Tuesday, December 24, 2024
Google search engine
Homeಸುದ್ದಿಸೊರಟೂರ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ

ಸೊರಟೂರ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ

 

ಗದಗ (ಕರ್ನಾಟಕ ವಾರ್ತೆ) ಫೆಬ್ರುವರಿ 13:   ಸೋಮವಾರದಂದು ಸೊರಟೂರ ಗ್ರಾಮದಲ್ಲಿ ಆನೆ ಅಂಬಾರಿಯೊಂದಿಗೆ  ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ  ಜಿಲ್ಲಾಧಿಕಾರಿಗಳಾದ ವೈಶಾಲಿ ಎಮ್. ಎಲ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಪ್ರಶಾಂತ ವರಗಪ್ಪನವರ,  ಸಹಾಯಕ ನಿರ್ದೇಶಕರಾದ ಶ್ರೀಮತಿ ವಿಜಯಲಕ್ಷ್ಮೀ ಇಂಗಳಳ್ಳಿ , ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ದಲಿತ ಮುಖಂಡರು ಮತ್ತು ಸಾರ್ವಜನಿಕರು ಸ್ವಾಗತಿಸಿದರು. ಗ್ರಾಮದ ವಿವಿಧ ಕಲಾ ತಂಡಗಳು, ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಸಂವಿಧಾನ ಪೀಠಿಕೆಯನ್ನು ಜನಸಾಮಾನ್ಯರಿಗೆ ಅರ್ಥೈಸಬೇಕು. ಈ ಮೂಲಕ ಜನಸಾಮಾನ್ಯರು ಸಹ ಸಂವಿಧಾನವನ್ನು ಅರಿತು ತಮ್ಮ ಹಕ್ಕು ಕರ್ತವ್ಯಗಳನ್ನು ಪಾಲಿಸಬೇಕು. ಸಂವಿಧಾನ ದತ್ತವಾಗಿ ಇರುವ ಹಕ್ಕುಗಳ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಜನ ಸಾಮಾನ್ಯರೆಲ್ಲರೂ ಒಂದು ಎಂಬ ಭ್ರಾತೃತ್ವ ಭಾವನೆ ಮೂಡಿಸುವ ಆಶಯವನ್ನು ಸಂವಿಧಾನ ಜಾಗೃತಿ ಕಾರ್ಯಕ್ರಮ ಒಳಗೊಂಡಿದೆ.
RELATED ARTICLES
- Advertisment -spot_img

Most Popular

error: Content is protected !!