Wednesday, June 18, 2025
Google search engine
Homeಜಿಲ್ಲಾಬೆಳಗಾವಿಯಲ್ಲಿ ಮಹಾಮಾರಿ ಕೊರೊನಾ ಮತ್ತೊಂದು ಪ್ರಕರಣ
spot_img

ಬೆಳಗಾವಿಯಲ್ಲಿ ಮಹಾಮಾರಿ ಕೊರೊನಾ ಮತ್ತೊಂದು ಪ್ರಕರಣ

ಬೆಳಗಾವಿ: ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು, ಬೆಳಗಾವಿಯಲ್ಲಿ ಮತ್ತೊಂದು ಪ್ರಕರಣ ಕಂಡು ಬಂದಿದೆ.

72 ವರ್ಷದ ವೃದ್ಧ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ವಾರ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ  ಗರ್ಭಿಣಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈಗ ಮತ್ತೊಂದು ಪ್ರಕರಣ ದಾಖಲಾಗಿದ್ದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.

ಬೆಳಗಾವಿ ಜಿಲ್ಲಾಸ್ಪತ್ರೆ ಹಾಗೂ ಎಲ್ಲಾ ತಾಲ್ಲೂಕಾಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಬೆಡ್, ಔಷಧಿ ಸೇರಿ ಎಲ್ಲ ರೀತಿಯ ಸಿದ್ಧತೆಯನ್ನು ಆರೋಗ್ಯ ಇಲಾಖೆ ಕೈಗೊಂಡಿದೆ. ಅಲ್ಲದೇ ಕೊರೊನಾ ಲಕ್ಷಣಗಳು ಕಂಡು ಬಂದವರು ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಈಶ್ವರ ಗಡಾದ ತಿಳಿಸಿದ್ದಾರೆ.

RELATED ARTICLES
- Advertisment -spot_img

Most Popular

error: Content is protected !!