Wednesday, June 18, 2025
Google search engine
Homeರಾಜ್ಯಕೊರೊನಾ ಸೋಂಕಿಗೆ 70 ವರ್ಷದ ವೃದ ಬಲಿ
spot_img

ಕೊರೊನಾ ಸೋಂಕಿಗೆ 70 ವರ್ಷದ ವೃದ ಬಲಿ

ಬೆಳಗಾವಿ: ಕೊರೊನಾ ದೃಢಪಟ್ಟ 70 ವರ್ಷದ ರೋಗಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟ ಘಟನೆ ಇಲ್ಲಿನ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ನಿನ್ನೆಯಷ್ಟೇ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಬಳಿಕ ಬಿಮ್ಸ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಮೃತ ವ್ಯಕ್ತಿ ಬೆಳಗಾವಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ನಿವಾಸಿ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರನ್ನು ಚಿಕಿತ್ಸೆಗೆಂದು ಬಿಮ್ಸ್ ಆಸ್ಪತ್ರೆಯಲ್ಲಿ ನಿನ್ನೆಯಷ್ಟೇ ದಾಖಲು ಮಾಡಲಾಗಿತ್ತು. ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೋವಿಡ್ ಪಾಸಿಟಿವ್ ಬಂದಿತ್ತು. ತಕ್ಷಣ ಅವರನ್ನು ಬಿಮ್ಸ್ ಆಸ್ಪತ್ರೆಯ ಕೋವಿಡ್ ವಾರ್ಡ್​ಗೆ ಶಿಫ್ಟ್ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದ ಹಿನ್ನೆಲೆಯಲ್ಲಿ ರೋಗಿ ನಿಧನರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಠಲ ಶಿಂಧೆ ಅವರನ್ನು ಸಂಪರ್ಕಿಸಿದಾಗ, ”ಮೃತ ವ್ಯಕ್ತಿ ಹೃದಯ, ಮೆದುಳು, ಬಿಪಿ, ಶುಗರ್ ಸೇರಿ ಮತ್ತಿತರ ರೋಗಗಳಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಆಗ ಅವರನ್ನು ನಿನ್ನೆ ಸಾಯಂಕಾಲ ಜಿಲ್ಲಾಸ್ಪತ್ರೆಗೆ ತೆಗೆದುಕೊಂಡು ಬಂದಿದ್ದರು. ಕೂಡಲೇ ನಾವು ಕೋವಿಡ್ ವಾರ್ಡ್​​ಗೆ ಶಿಫ್ಟ್ ಮಾಡಿದ್ದೆವು. ಇದಾದ ಎರಡು ಗಂಟೆಯಲ್ಲಿ ಅವರು ಮೃತರಾಗಿದ್ದಾರೆ. ಮೃತ ವ್ಯಕ್ತಿ ಸ್ಯಾಂಪಲ್ಸ್ ಪರೀಕ್ಷೆಗೆ ಹುಬ್ಬಳ್ಳಿಗೆ ಕಳುಹಿಸಿಕೊಡುತ್ತಿದ್ದು, ಆ ವರದಿ ಬಂದ ಬಳಿಕ ಸಾವಿನ ಕುರಿತು ಸ್ಪಷ್ಟತೆ ತಿಳಿಯಲಿದೆ” ಎಂದು ತಿಳಿಸಿದರು.

RELATED ARTICLES
- Advertisment -spot_img

Most Popular

error: Content is protected !!