Wednesday, June 18, 2025
Google search engine
Homeಜಿಲ್ಲಾಕಳೆದೊಂದು ತಿಂಗಳ ಅವಧಿಯಲ್ಲಿ ಎರಡನೇ ಗ್ಯಾಂಗ್ ರೇಪ್ ಪ್ರಕರಣ
spot_img

ಕಳೆದೊಂದು ತಿಂಗಳ ಅವಧಿಯಲ್ಲಿ ಎರಡನೇ ಗ್ಯಾಂಗ್ ರೇಪ್ ಪ್ರಕರಣ

ಬೆಳಗಾವಿ: ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಕಳೆದೊಂದು ತಿಂಗಳ ಅವಧಿಯಲ್ಲಿ ಎರಡನೇ ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿದೆ.‌

 

ಬೆಳಗಾವಿ ನಗರದ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗ್ಯಾಂಗ್ ರೇಪ್ ಪ್ರಕರಣ ಬೆಳಕಿಗೆ ಬಂದಿದ್ದು, ಇದರಿಂದ ಬೆಳಗಾವಿ ಜನರು ಬೆಚ್ಚಿಬಿದಿದ್ದಾರೆ. ಕಳೆದ ಡಿಸೆಂಬರ್ ತಿಂಗಳಲ್ಲಿ 15ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಆರು ಜನರು ಸೇರಿ ಬೆಳಗಾವಿ ತಾಲೂಕಿನ ಹೊರವಲಯದಲ್ಲಿರುವ ಗುಡ್ಡಗಾಡು ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ. ಬಳಿಕ ಲೈಂಗಿಕ ದೌರ್ಜನ್ಯದ ದೃಶ್ಯ ಸೆರೆಹಿಡಿದು ನಿರಂತರ ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ವಿಷಯ ಬಾಲಕಿ ಪೋಷಕರಿಗೆ ಗೊತ್ತಾಗುತ್ತಿದ್ದಂತೆ ದೂರು ದಾಖಲಿಸಲಾಗಿದೆ.

ಪ್ರಕರಣ ಬಗ್ಗೆ ಮಾತನಾಡಿರುವ ಪೊಲೀಸ್ ಆಯುಕ್ತ ಭೂಷಣ್ ಬೋಸರೆ ಅವರು, ಪ್ರಕರಣ ಸಂಬಂಧ ಆರು ಜನ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೊದಲು ಬಾಲಕಿಯ ಪರಿಚಯ ಮಾಡಿಕೊಂಡು ಸ್ನೇಹ ಗಳಿಸುತ್ತಾನೆ. ಬಳಿಕ ಪುಸಲಾಯಿಸಿಕೊಂಡು ಫ್ರೆಂಡ್ಸ್ ಜತೆಗೆ ಅತ್ಯಾಚಾರ ಮಾಡಿದ್ದಾರೆ. ಅತ್ಯಾಚಾರದ ಕೃತ್ಯವನ್ನು ಆರೋಪಿಗಳು ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ವಿಡಿಯೋ ರೆಕಾರ್ಡ್‌ ಮಾಡಿ ಬ್ಲ್ಯಾಕಮೇಲ್ ಮಾಡಿ ಮತ್ತೆ ಮೂರು ಆರೋಪಿಗಳಿಂದ ಸಾಮೂಹಿಕ ಅತ್ಯಾಚಾರ ಆಗಿದೆ. ಪ್ರಕರಣ ಸಂಬಂಧ ಈಗಾಗಲೇ 5ಜನ ಆರೋಪಿಗಳನ್ನ ಅರೆಸ್ಟ್ ಮಾಡಲಾಗಿದೆ. ಮತ್ತೋರ್ವನ ಬಂಧನಕ್ಕೆ ಶೋಧ ಕಾರ್ಯಾಚರಣೆ ಮಾಡುತ್ತಿದ್ದೇವೆ. ಐವರು ಆರೋಪಿಗಳ ಪೈಕಿ ಇಬ್ಬರು ಆರೋಪಿಗಳು ಮೈನರ್ ಇದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಪ್ರಯತ್ನ ಮಾಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.‌

RELATED ARTICLES
- Advertisment -spot_img

Most Popular

error: Content is protected !!