ಬೆಳಗಾವಿ: ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ಮುಸ್ಲಿಂ ಧರ್ಮಗ್ರಂಥ ಸುಟ್ಟ ಆರೋಪಿಗಳನ್ನು ಬಂಧನಕ್ಕೆ ಆಗ್ರಹಿಸಿ ಮುಸ್ಲಿಂ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಜಿಲ್ಲಾ ಆಡಳಿತ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.
ನಗರದ ಚೆನ್ನಮ್ಮ ವೃತ್ತದಿಂದ ಜಿಲ್ಲಾ ಅಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನಾಕಾರರು ಪ್ರತಿಭಟಿಸಿ ಧರ್ಮಗ್ರಂಥ ಸುಟ್ಟು ಒಂದು ತಿಂಗಳು ಕಳೆದರೂ ಆರೋಪಿಗಳ ಪತ್ತೆಯಾಗಿಲ್ಲ ಆದ್ದರಿಂದ ಆರೋಪಿಗಳನ್ನು ಬಂಧಿಸುವಂತೆ ಮುಸ್ಲಿಂ ಸಮುದಾಯದ ಪಟ್ಟು ಹಿಡಿದರು.
ಸೂಕ್ಷ್ಮ ಪ್ರಕರಣವಾಗಿದ್ದರಿಂದ ಸಿಐಡಿಗೆ ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ.