Wednesday, June 18, 2025
Google search engine
Homeಜಿಲ್ಲಾಹಾಸ್ಟೆಲ್ ಗಳಿಗೆ ದಿಢೀರ ಭೇಟಿ ನೀಡಿದ :ಜಿಪಂ ಸಿಇಒ ರಾಹುಲ್ ಶಿಂಧೆ
spot_img

ಹಾಸ್ಟೆಲ್ ಗಳಿಗೆ ದಿಢೀರ ಭೇಟಿ ನೀಡಿದ :ಜಿಪಂ ಸಿಇಒ ರಾಹುಲ್ ಶಿಂಧೆ

ಬೆಳಗಾವಿ : ಬೆಳಗಾವಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು, ಬೆಳಗಾವಿ ನಗರದ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಯ  ಅಜಮನಗರದ ಮೆಟ್ರಿಕ್ ನಂತರದ ಬಾಲಕಿಯರ  ವಸತಿ ನಿಲಯ ಹಾಗೂ ಶಿವಬಸವ ನಗರದ ಮೆಟ್ರಿಕ್ ಪೂರ್ವ ಬಾಲಕರ ಹಾಸ್ಟೆಲ್ ಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಪರಿಶೀಲನೆ : ಹಾಸ್ಟೆಲ್ ನ ಅಡುಗೆ ಕೋಣೆ, ಶೌಚಾಲಯ ಸೇರಿದಂತೆ ಕೊಠಡಿಗಳಿಗೆ ಸಿಇಓ ಭೇಟಿ ನೀಡಿ ಅಲ್ಲಿರುವ ವ್ಯವಸ್ಥೆಯ ಕೂಲಂಕಷ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಸಮಾಲೋಚಿಸಿದ್ದಾರೆ. ಹಾಸ್ಟೆಲ್ ನಲ್ಲಿ ಲಭ್ಯವಾಗುತ್ತಿರುವ ಸೌಲಭ್ಯ, ಕುಡಿಯುವ ನೀರಿನ ಶುದ್ಧತೆ ಹಾಗೂ ಶುಚಿತ್ವದ ಕುರಿತಂತೆ ಮಾಹಿತಿ ಕಲೆ ಹಾಕಿದ್ದಾರೆ.

ಅಜಮನಗದಲ್ಲಿರುವ  ವಸತಿ ನಿಲಯದಲ್ಲಿ ಗಂಥಾಲಯ ಚಿಕ್ಕದಾಗಿದ್ದು ಮಕ್ಕಳಿಗೆ ಓದುವುದಕ್ಕೆ ಅನಾನಕೂಲವಾಗುತ್ತಿರುವುದನ್ನು ಮನಗಂಡು ಗಂಥಾಲಯವನ್ನು ದೊಡ್ಡದಾಗಿ ವಿಸ್ತರಣೆ ಮಾಡಲು ಅಧಿಕಾರಿಗಳಿಗೆ ತಿಳಿಸಿದರು.  ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿದ್ದಾರೆ. ‘ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಲಭ್ಯವಾಗುವ ಸೌಲಭ್ಯಗಳನ್ನು ನಿಯಮಾನುಸಾರ ವಿತರಣೆ ಮಾಡಬೇಕು’ ಎಂದು ಹಾಸ್ಟೆಲ್ ಸಿಬ್ಬಂದಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ವಸತಿ ನಿಲಯದ ವಿದ್ಯಾರ್ಥಿಗಳು (students) ಶಿಸ್ತು ಮತ್ತು ಜವಾಬ್ದಾರಿಗಳನ್ನು ಪಾಲಿಸಬೇಕು. ಇದರಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ’ ಎಂದು ಇದೇ ವೇಳೆ ವಿದ್ಯಾರ್ಥಿಗಳಿಗೆ ಸಿಇಓ ಅವರು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪರಿಶಿಷ್ಠ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ, ವಸತಿ ನಿಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -spot_img

Most Popular

error: Content is protected !!