Monday, June 23, 2025
Google search engine
Homeಜಿಲ್ಲಾವಿವಿಧ ಅಭಿವೃದ್ಧಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ. ರಾಜೀವ ಕೂಲೇರ ಅಧಿಕಾರ ಸ್ವೀಕಾರ
spot_img

ವಿವಿಧ ಅಭಿವೃದ್ಧಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ. ರಾಜೀವ ಕೂಲೇರ ಅಧಿಕಾರ ಸ್ವೀಕಾರ

ಬೆಳಗಾವಿ : ಕರ್ನಾಟಕ ಕಾಡುಗೊಲ್ಲ ಸಮುದಾಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಡಾ. ರಾಜೀವ ಕೂಲೇರ ಅಧಿಕಾರಿ ವಹಿಸಿಕೊಳ್ಳಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಕೆ. ಅಶ್ವಥ ಅವರು ಆದೇಶ ಹೊರಡಿಸುತ್ತಾರೆ.

ಸದರಿಯವರಿಗೆ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಅಲೆಮಾರಿ ಹಾಗೂ ಅರೆ-ಅಲೆಮಾರಿ ಅಭಿವೃದ್ಧಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗಳ ಹೆಚ್ಚುವರಿ ಪ್ರಭಾರವನ್ನು ವಹಿಸಲಾಗಿದೆ.

ಡಾ. ರಾಜೀವ ಕೂಲೇರ ಅವರು ಈ ಹಿಂದೆ ಬೆಳಗಾವಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ (ಆಡಳಿತ) ಉಪ ನಿರ್ದೇಶಕ ಕಾರ್ಯ ನಿರ್ವಹಿಸಿರುತ್ತಾರೆ.

RELATED ARTICLES
- Advertisment -spot_img

Most Popular

error: Content is protected !!