ಬೆಳಗಾವಿ; ರಾಜ್ಯದಲ್ಲಿ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ ಹಿನ್ನಲೆ ಸಚಿವ ಜಮೀರ್ ಅಹಮ್ಮದ್ ರಾಜೀನಾಮೆಗೆ ಆಗ್ರಹಿಸಿ ಬೆಳಗಾವಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟಿಸಿದರು.
ನಗರದ ಚೆನ್ನಮ್ಮ ವೃತ್ತದಿಂದ ಜಿಪಂಸಿಇಓ ಕಚೇರಿವರೆಗೆ ಪಾದಯಾತ್ರೆ ಮೂಲಕ ಪ್ರತಿಭನಾಕಾರರು ಪ್ರತಿಭಟಿಸಿ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ ರಾಜೀನಾಮೆಗೆ ಕೊಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದರು.
ಇದೇ ವೇಳೆ ಜಿಪಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು. ಈ ವೇಳೆ ಬಿಜೆಪಿ ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರುನೂರಾರು ಬಿಜೆಪಿ ಕಾರ್ಯಕರ್ತರು ಬಿಜೆಪಿ ಪೊಲೀಸರ ವಶಕ್ಕೆ ಪಡೆದುಕೊಂಡರು.