ಬೆಳಗಾವಿ: 7ನೇ ವೇತನ ಆಯೋಗದ ಸೌಲಭ್ಯವನ್ನು ರಾಜ್ಯ ಸರ್ಕಾರಿ ನೌಕರರಿಗೆ ವಿಸ್ತರಿಸಿ ಮಹಾನಗರ ಪಾಲಿಕೆ ಅಧಿಕಾರಿ ನೌಕರರಿಗೆ ಯಥಾವತ್ತಾಗಿ ಸರ್ಕಾರ ಆರ್ಥಿಕ ಇಲಾಖೆಯಿಂದಲೇ ಅನುಧಾನವನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಮಹಾನಗರ ಪಾಲಿಕೆ ಮುಂಭಾಗದಲ್ಲಿ ಪ್ರತಿಭಟಿಸಿದರು.
ನಗರದ ಮಹಾನಗರ ಪಾಲಿಕೆ ಮುಂಬಾಗದಲ್ಲಿ ಪ್ರತಿಭಟನಾಕಾರರು ಪ್ರತಿಭಟಿಸಿ ರಾಜ್ಯ ಸರಕಾರ ವಿದ್ದದ ಘೋಷಣೆ ಕೂಗಿ ಆಕ್ರೋಶ ಹೋರಹಾಕಿದರು.
ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಮಾಡಿಕರಡು ಅಧಿಸೂಚನೆಯನ್ನು ಪ್ರಕಟಿಸಬೇಕು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಜಾರಿ ಮಾಡಿರುವ ಕೆ.ಜಿ.ಐ.ಡಿ. ಜಿ.ಪಿ.ಎಫ್ ಸೌಲಭ್ಯವನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಆರೋಗ್ಯ ಸೌಲಭ್ಯದ ಜ್ಯೋತಿ/ ಆರೋಗ್ಯ ಸಂಜೀವಿನಿಯನ್ನು ಜಾರಿಗೊಳಿಸಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ವರ್ಷ ಆಯೋಜಿಸುವ ಕ್ರೀಡೆಯನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ ನೌಕರರಿಗೆ ಆಯೋಜಿಸಬೇಕೆಂದು ಮನವಿ ಮಾಡಿದರು.
ಕರ್ನಾಟಕ ರಾಜ್ಯ ಸುಮಾರು ವರ್ಷಗಳಿಂದ ವಿವಿಧ ವೃಂದದ ಹುದ್ದೆಗಳನ್ನು ಮುಂಬಡ್ತಿ ಪಡೆಯಲು ವಂಚಿತರಾಗಿರುವುದರಿಂದ ಕೂಡಲೇ ವೃಂದವಾರು ಮುಂಬಡ್ತಿ ನೀಡಬೇಕು ಎಂದು ಆಗ್ರಹಿಸಿದರು.