ಬೆಳಗಾವಿ: ಹಾಸ್ಟೆಲಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸಿ ಹಾಸ್ಟೆಲಗಳಿಗೆ ಪ್ರವೇಶಾತಿ ನೀಡಬೇಕು ಸೇರಿದಂತೆ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಬುಧುವಾರ ಜಿಲ್ಲಾ ಆಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ನಗರದ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮೂಲಕ ಪ್ರತಿಭನಾಕಾರರು ಪ್ರತಿಭಟಿಸಿ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡುವ ಕಿಟ್ ಗಳನ್ನ ತಕ್ಷಣವೇ ಎಲ್ಲ ವಿದ್ಯಾರ್ಥಿಗಳಿಗೆ ನೀಡಬೇಕು, ಪ್ರತಿ ವಿದ್ಯಾರ್ಥಿಗೆ ಊಟಕ್ಕೆ ನೀಡುವ 1850 ರೂ ಹಣವನ್ನು ಹೆಚ್ಚಳ ಮಾಡಬೇಕೆಂದು ಆಗ್ರಹಿಸಿದರು.
ರಾಜ್ಯದಲ್ಲಿ ಸಮಾಜ ಕಲ್ಯಾಣ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಇಲಾಖೆಗಳ ಹಾಸ್ಟೆಲ್ ಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು. ಬಾಕಿ ಉಳಿದಿರುವ ಹಿಂದಿನ ವರ್ಷದ ವಿದ್ಯಾರ್ಥಿ ವೇತನವನ್ನು ತಕ್ಷಣವೇ ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆ ವೇಳೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿಭಾಗ ಸಂಘಟನಾ ಕಾರ್ಯದರ್ಶಿ ಸಚಿನ ಹಿರೇಮಠ,ಜಿಲ್ಲಾ ಸಂಚಾಲಕ ಕುಶಾಲ ಘೋಡಗೇರಿ, ನಿಂಗರಾಜ ಪೂಜಾರಿ, ಸೇರಿದಂತೆ ಇತರರು ಇದರು.