ಬೆಂಗಳೂರು :ಸತತ ಪ್ರಯತ್ನ ಹಾಗೂ ನಿನ್ನೆಯೂ ಸಹ ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ನಿನ್ನೆ ಭೇಟಿ ಮಾಡಿ, ಮನವಿ ಮಾಡಿದಾಗ, ನಮ್ಮ ಮನವಿಗೆ ತಕ್ಷಣವೇ ಸ್ಪಂದಿಸಿ, ಇದೇ ಭಾನುವಾರ ಅವರ ಕರ್ನಾಟಕ ಪ್ರವಾಸದಂದು ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಇದರಲ್ಲಿ ನಮ್ಮ ಬೆಂಗಳೂರು – ಬೆಳಗಾವಿ ರೈಲಿಗೂ ಸಹ ಚಾಲನೆ ದೊರೆಯಲಿದ್ದು, ಬೆಳಗಾವಿ ನಾಗರಿಕರ ಬಹು ದಿನಗಳ ಕನಸು ನನಸಾಗಲಿದೆ ಎಂದು ಬೆಳಗಾವಿ ಲೋಕಸಭಾ ಸಂಸದರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗದೀಶ ಶೆಟ್ಟರ ತಿಳಿಸಿದರು.
ಈ ವಂದೇ ಭಾರತ್ ರೈಲು ಬೆಳಗಾವಿಯಿಂದ ಬೆಳಗ್ಗೆ 05:20 ಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 01:50 ಕ್ಕೆ ತಲುಪಲಿದೆ. ಬೆಂಗಳೂರಿನಿಂದ ವಾಪಸ್ಸು ಮಧ್ಯಾಹ್ನ 02:20 ಕ್ಕೆ ಹೊರಟು ರಾತ್ರಿ 10:40 ಕ್ಕೆ ಬೆಳಗಾವಿಗೆ ತಲುಪಲಿದೆ.
ನಮ್ಮ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಯವರಿಗೆ, ಕೇಂದ್ರ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಹಾಗೂ ರಾಜ್ಯಖಾತೆ ಸಚಿವರಾದ ಶ್ರೀ ವಿ. ಸೋಮಣ್ಣ ಅವರಿಗೆ ಈ ಕಾರ್ಯಕ್ಕೆ ಸಹಕಾರ ನೀಡಿದ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ ಜೋಶಿ ಅವರಿಗೆ ಬೆಳಗಾವಿ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು ಸಲ್ಲಿಸುತ್ತೇನೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ